ಮಂಗಳೂರು: ಶಾಸಕ ಜೆ ಆರ್ ಲೋಬೊ ರಾಜೀವ್ ಗಾಂಧಿ ಆರೋಗ್ಯ ವಿವಿ ಸೆನೆಟ್ ಸದಸ್ಯರಾಗಿ ನೇಮಕ

ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ. ಆರ್ ಲೋಬೋರವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸೆನೆಟ್‍ಗೆ ಸದಸ್ಯರಾಗಿ ಚುನಾಯಿತರಾಗಿರುತ್ತಾರೆಂದು ಎಂ. ಗುರುರಾಜ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

jr lobo

ಇದಲ್ಲದೆ, ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಸಿ.ಎನ್. ಅಶ್ವಥ್‍ನಾರಾಯಣ ಹಾಗೂ ಕೋಲಾರದ ಮಾಲೂರು ಕ್ಷೇತ್ರದ ಶಾಸಕ ಕೆ.ಎಸ್. ಮಂಜುನಾಥಗೌಡ ಇವರು ನೂತನ ಸದಸ್ಯರಾಗಿ ಆಯ್ಕೆಗೊಂಡಿರುತ್ತಾರೆ.

Leave a Reply