ಮಂಗಳೂರು: ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜಿಗೆ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ

Spread the love

ಮಂಗಳೂರು: ಇತ್ತೀಚೆಗೆ ನಡೆದ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಗರದ ಶಾರದ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಮಂಗಳೂರು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಪಡೆದಿರುತ್ತದೆ.

1 2

ಈ ಸಂದರ್ಭ ಕಾಲೇಜಿನ ಆಡಳಿತ ಮಂಡಳಿ ಮತ್ತು ಕಾಲೇಜಿನ ವತಿಯಿಂದ ವಾಲಿಬಾಲ್ ತಂಡದ ವಿದ್ಯಾರ್ಥಿ ಸ್ಪರ್ಧಿಗಳನ್ನು ಅಭಿನಂದಿಸಲಾಯಿತು. ಕಾಲೇಜಿನ ಸಂಚಾಲಕರಾದ ಶ್ರೀ ಕೃಷ್ಣ ಪ್ರಸಾದ್ ರೈ, ಪ್ರಾಂಶುಪಾಲರಾದ ಡಾ. ಕಿಶೋರ್ ಕುಮಾರ್ ರೈ ಶೇಣಿ, ಉಪ ಪ್ರಾಂಶುಪಾಲರಾದ ಶ್ರೀ ಹರೀಶ್ ಭಟ್, ದೈಹಿಕ ಶಿಕ್ಷಣ ನಿರ್ದೇಶಕ ರಾಜ್ ಕಿಶೋರ್ ಭಂಡಾರಿ ಮತ್ತು ತರಬೇತುದಾರ ಸರ್ಫಾಜ್ ಉಪಸ್ಥಿತರಿದ್ದರು.


Spread the love