ಮಂಗಳೂರು: ಸ್ತ್ರೀ ಶಕ್ತಿ ಸಹಕಾರಿ ಸಂಘಗಳ ಪದಾಧಿಕಾರಿಗಳಿಗೆ ಕಾರ್ಯ ದಕ್ಷತೆ ತರಬೇತಿ ಶಿಬಿರ

Spread the love

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ತ್ರೀ ಶಕ್ತಿ ಸಹಕಾರಿ ಸಂಘಗಳ ಹಾಗೂ ಮಹಿಳಾ ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕಾರ್ಯ ದಕ್ಷತೆ ತರಬೇತಿ ಶಿಬಿರವು ಭವನ, ಕದ್ರಿ, ಮಂಗಳೂರು ಇದರ ಸಭಾಂಗಣದಲ್ಲಿ ನಡೆಯಿತು.

b

ಕಾರ್ಯ ದಕ್ಷತೆ ತರಬೇತಿ ಶಿಬಿರದ ಉದ್ಘಾಟನೆಯನ್ನು ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಬಿ. ಕೆ. ಸಲೀಂ ರವರು ನೆರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಮೀನಾಕ್ಷಿ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ರೀ ಸುಂದರ ಪೂಜಾರಿ, ನಿರೂಪಣಾಧಿಕಾರಿ ಶ್ರೀ ನಟರಾಜ್ ರವರು ಉಪಸ್ಥಿತರಿದ್ದರು.

ದ. ಕ. ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷರಾದ  ಶ್ರೀ ಹರೀಶ್ ಆಚಾರ್ ರವರು ತರಬೇತಿ ಶಿಬಿರದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಸಹಕಾರ ಇಲಾಖೆಯ ಶ್ರೀ ಎನ್. ಜೆ. ಗೋಪಾಲ್ ರವರು ಉಪನ್ಯಾಸ ನೀಡಿದರು.

a

ದ. ಕ. ಜಿಲ್ಲಾ ಸಹಕಾರಿ ಯೂನಿಯನ್‍ನ ನಿರ್ದೇಶಕರಾದ ಶ್ರೀ ನೀಲಯ ಎಂ. ಅಗರಿ ಸ್ವಾಗತಿಸಿದರು.  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸಾವಿತ್ರಿ ರೈ ಕೆ., ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ತ್ರೀ ಶಕ್ತಿ ಸಹಕಾರಿ ಸಂಘಗಳ ಹಾಗೂ ಮಹಿಳಾ ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಒಟ್ಟು 80 ಮಂದಿ ಈ ಶಿಬಿರದಲ್ಲಿ ಹಾಜರಿದ್ದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ಮಂಗಳೂರು, ಸಹಕಾರ ಇಲಾಖೆ, ದ. ಕ. ಜಿಲ್ಲೆ ಇವರು ತರಬೇತಿ ಶಿಬಿರವನ್ನು ಆಯೋಜಿಸಿದ್ದರು.


Spread the love