ಮಂಗಳೂರು: ಸ್ಮಾರ್ಟ್ ಸಿಟಿ – ಶೀಘ್ರ ಯೋಜನೆಯ ಅನುಷ್ಠಾನ: ಸಂಸದ ನಳಿನ್

ಮಂಗಳೂರು : ದೇಶದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಸ್ಮಾರ್ಟ್ ಸಿಟಿ ಯೋಜನೆಗೆ ಮಂಗಳೂರು ನಗರವನ್ನು ಸೇರ್ಪಡೆಗೊಳಿಸಲು ಅಗತ್ಯ ಕ್ರಮವನ್ನು ಕೇಂದ್ರ ಸರಕಾರದಲ್ಲಿ ಕೈಗೊಳ್ಳಲಾಗಿದೆ. ಶೀಘ್ರದಲ್ಲಿ ಯೋಜನೆ ಅನುಷ್ಠಾನವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಗೆ ರಾಜ್ಯ 6 ನಗರಗಳೊಂದಿಗೆ ಮಂಗಳೂರು ಸಹ ಸೇರ್ಪಡೆಯಾಗಿದೆ. ಈ ಹಿಂದೆ ಈ ಯೋಜನೆಯೊಳಗೆ ಮಂಗಳೂರು ಸಿಟಿಯನ್ನು ಸೇರಿಸಿಕೊಳ್ಳ ಬೇಕು ಎಂಬ ಬೇಡಿಕೆಯನ್ನು ಕೇಂದ್ರ ಸರಕಾರಕ್ಕೆ ಸಂಸದನ ನೆಲೆಯಲ್ಲಿ ಮನವಿ ಮಾಡಿದ್ದೇನೆ. ಇದೀಗ ಕೇಂದ್ರ ಸರಕಾರ ಇದಕ್ಕೆ ಸಕಾರಾತ್ಮಕ ರೀತಿಯಲ್ಲಿ ಸ್ಪಂದಿಸಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Please enter your comment!
Please enter your name here