ಮಂಗಳೂರು: ಸ್ವಾತಂತ್ರ್ಯ ದಿನಾಚರಣೆ: ಪ್ಲಾಸ್ಟಿಕ್ ಧ್ವಜ ಬಳಕೆ ನಿಷೇಧ- ಜಿಲ್ಲಾಧಿಕಾರಿ

Spread the love

ಮಂಗಳೂರು; ಸ್ವಾತಂತ್ರ್ಯ ದಿನಾಚರಣೆಯಂದು ಮತ್ತು ಇತರೆ ದಿನಗಳಲ್ಲಿ ಪ್ಲಾಸ್ಟಿಕ್‍ನಿಂದ ತಯಾರಿಸಿದ ಧ್ವಜಗಳ ಮಾರಾಟ ಮತ್ತು ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ತಿಳಿಸಿದ್ದಾರೆ.
ಅವರು ಗುರುವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ವರ್ಷ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ಕಾರ್ಯಕ್ರಮ ನೆಹರೂ ಮೈದಾನದಲ್ಲಿ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಅಂದು ಬೆಳಿಗ್ಗೆ 9ಗಂಟೆಗೆ ಧ್ವಜಾರೋಹಣ ಮಾಡಲಿದ್ದಾರೆ. ಪೊಲೀಸ್, ಎನ್‍ಸಿಸಿ, ಸೇವಾದಳ ಘಟಕಗಳಿಂದ ಕವಾಯತು ನಡೆಯಲಿದ್ದು, ಬಳಿಕ ಸಚಿವರು ಸ್ವಾತಂತ್ರ್ಯ ಸಂದೇಶ ನೀಡಲಿದ್ದಾರೆ ಎಂದು ಅವರು ಹೇಳಿದರು.
ಸರಕಾರಿ ನೌಕರರು ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಸಂಜೆ ಸಾಂಸ್ಕøತಿಕ ಕಾರ್ಯಕ್ರಮಗಳು ಕದ್ರಿ ಗೋರಕ್ಷಕನಾಥ ಹಾಲ್‍ನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಮಹಾನಗರಪಾಲಿಕೆ ಪ್ರಭಾರ ಆಯುಕ್ತ ಗೋಕುಲದಾಸ್ ನಾಯಕ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.


Spread the love