ಮದುವೆ ಆಮಿಷ ಒಡ್ಡಿ ಬಾಲಕಿ ಮೇಲೆ ಅತ್ಯಾಚಾರ

ರಾಮನಗರ: ಮದುವೆಯಾಗುವುದಾಗಿ ಆಮಿಷ ಒಡ್ಡಿ ಪ್ರೇಮಿಯೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ರಾಮನಗರಗದಲ್ಲಿ ಬೆಳಕಿಗೆ ಬಂದಿದೆ.

ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಕಳೆದ 2 ದಿನಗಳ ಹಿಂದೆ ಗಿರೀಶ್ ಎಂಬಾತ ಆಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ಹೇಳಿ ಕಾರಿನಲ್ಲಿ ಬೆಂಗಳೂರಿಗೆ ಕರೆತಂದಿದ್ದ. ಮಾರ್ಗ ಮಧ್ಯೆ ಕಾರು ಕೆಟ್ಟು ಹೋಗಿದೆ ಎಂದು ಹೇಳಿದ್ದು  ಗಿರೀಶ್ ಸ್ನೇಹಿತರು ಕಾರಿನಿಂದ ಕೆಳಗಿಳಿದು ಹೋದಾಗ ಪ್ರೇಮಿ ಗಿರೀಶ್ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ಬಾಲಕಿಯನ್ನು ಅದೇ ಕಾರಿನಲ್ಲಿ ಆಕೆಯ ಮನೆ ಬಳಿ ಬಿಟ್ಟು ಹೋಗಿದ್ದಾನೆ. ನಿಧಾನವಾಗಿ ಈ ವಿಚಾರ ಬಾಲಕಿಯ ಪೋಷಕರಿಗೆ ತಿಳಿದಿದ್ದು, ಕೂಡಲೇ ಅವರು ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಸ್ತುತ ಪ್ರಕರಣ ಸಂಬಂಧ ಬಾಲಕಿಯ ಪ್ರೇಮಿ ತುಮಕೂರು ಮೂಲದ ಗಿರೀಶ್ ಮತ್ತು ಆತನ ಇಬ್ಬರು ಸ್ನೇಹಿತರಾದ ಗಂಗರಾಜ್ ಮತ್ತು ಕೆಂಪರಾಜ್ ಎಂಬುವವನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳ ವಿರುದ್ಧ ಪೋಸ್ಕೋ, ಅಪಹರಣ, ಮತ್ತು ಅತ್ಯಾಚಾರ ಪ್ರಕರಣದಡಿಯಲ್ಲಿ ದೂರು ದಾಖಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply