ಮಲ್ಲಿಕಟ್ಟೆ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಜಂತುಹುಳ ಮಾತ್ರೆ ವಿತರಣೆ

16
Spread the love

ಮಲ್ಲಿಕಟ್ಟೆ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಜಂತುಹುಳ ಮಾತ್ರೆ ವಿತರಣೆ

ಮಂಗಳೂರು: ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ- ಆಗಸ್ಟ್ 2018 ಇದರ ಜಿಲ್ಲಾ ಮಟ್ಟದ ಉದ್ಘಾಟನಾ ಕಾರ್ಯಕ್ರಮವು ಇಂದು ಸರಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆ, ಕದ್ರಿ ಮಲ್ಲಿಕಟ್ಟೆ ಇದರ ಸಭಾಂಗಣದಲ್ಲಿ ನಡೆಯಿತು.

ಲಿಸ್ಸಿ.ಕೆ.ವಿ.ಇವರ ಸ್ವಾಗತದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಯಾದ ಡಾ. ಅಶೋಕ್.ಹೆಚ್. ಇವರು ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮದ ಹಿನ್ನಲೆ ಮತ್ತು ಅವಶ್ಯಕತೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶಕೀಲಾ ಇವರು ವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿ ಡಾ.ರಾಮಕೃಷ್ಣ ರಾವ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶಿವರಾಮಯ್ಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಸುಂದರ ಪೂಜಾರಿಯವರು ಹಾಜರಿದ್ದರು. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯವರು ಹಾಜರಿದ್ದರು. ರುದ್ರೇಶ್‍ರವರು ಕಾರ್ಯಕ್ರಮ ನಿರೂಪಿಸಿದರು


Spread the love