ಮಹಾನಗರ ಪಾಲಿಕೆಯ ಆಶ್ರಯದಲ್ಲಿ ಸ್ವಚ್ಛ ಮಂಗಳೂರು ಅಭಿಯಾನ

ಮಹಾನಗರ ಪಾಲಿಕೆಯ ಆಶ್ರಯದಲ್ಲಿ ಸ್ವಚ್ಛ ಮಂಗಳೂರು ಅಭಿಯಾನ

ಮ0ಗಳೂರು: ಸ್ವಚ್ಛ ಭಾರತ ಮಿಷನ್ ಅಂಗವಾಗಿ ಸ್ವಚ್ಛ ಮಂಗಳೂರು ಅಭಿಯಾನದಡಿ ಮಹಾನಗರ ಪಾಲಿಕೆಯ ಆಶ್ರಯದಲ್ಲಿ ಗುರುವಾರ ನಗರದ ವಿವಿದೆಡೆ ಕಾರ್ಯಕ್ರಮಗಳನ್ಮ್ನ ಏರ್ಪಡಿಸಲಾಗಿತ್ತು.

swacha-mcc-2

ಪಣಂಬೂರಿನಲ್ಲಿ ಕೇಂದ್ರೀಯ ವಿದ್ಯಾಲಯ, ಪಣಂಬೂರು ಇವರ ಸಹಯೋಗದಲ್ಲಿ ಗುರುವಾರ “ಶಾಲಾ ಸ್ವಚ್ಛತಾ ಆಂದೋಲನ”ಕ್ಕೆ ಮಹಾನಗರಪಾಲಿಕೆ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಕವಿತಾ ಸನಿಲ್ ಚಾಲನೆ ನೀಡಿದರು. ¬ಮ.ನ.ಪಾ ಸದಸ್ಯರಾದ ಪ್ರತಿಭಾ ಕುಳಾಯಿ, ಗಣೇಶ್ ಹೊಸಬೆಟ್ಟು, ಪುರುಷೋತ್ತಮ ಚಿತ್ರಾಪುರ, ರಘುವೀರ್, ಆರೋಗ್ಯಾಧಿಕಾರಿ ಡಾ|| ಮಂಜಯ್ಯ ಶೆಟ್ಟಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದರು. ಶಾಲಾ ಆವರಣ ಸ್ವಚ್ಛಗೊಳಿಸುವ ಕಾರ್ಯ ನಡೆಸಲಾಯಿತು. ಮಕ್ಕಳಿಗೆ ಸ್ವಚ್ಛ ಸರ್ವೇಕ್ಷಣೆ ಕುರಿತು ಜಾಗೃತಿ ಮೂಡಿಸಲಾಯಿತು ಮತ್ತು ಬಟ್ಟೆ ಬ್ಯಾಗ್‍ಗಳನ್ನು ವಿತರಿಸಲಾಯಿತು.

ನಂತರ ಕೂಳೂರು ಚರ್ಚ್ ಶಾಲೆ ಇವರ ಸಹಯೋಗದಲ್ಲಿ ಬೆಳಿಗ್ಗೆ 11.30 ಗಂಟೆಗೆ “ಸ್ವಚ್ಛ ಸರ್ವೇಕ್ಷಣೆ-2017: ಜಾಗೃತಿ ಅಭಿಯಾನ” ಕಾರ್ಯಕ್ರಮ ನಡೆಸಲಾಯಿತು. ಮಹಾನಗರಪಾಲಿಕೆ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಕವಿತಾ ಸನಿಲ್ ಚಾಲನೆ ನೀಡಿದರು. ಮಹಾನಗರಪಾಲಿಕೆ ಸದಸ್ಯ ದಯಾನಂದ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಮಕ್ಕಳಿಗೆ ಸ್ವಚ್ಛ ಸರ್ವೇಕ್ಷಣೆ ಕುರಿತು ಜಾಗೃತಿ ಮೂಡಿಸಲಾಯಿತು ಮತ್ತು ಬಟ್ಟೆ ಬ್ಯಾಗ್‍ಗಳನ್ನು ವಿತರಿಸಲಾಯಿತು.

ದ. ಕ. ಜಿಲ್ಲಾ ಪಂಚಾಯತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ವಿದ್ಯಾನಗರ, ಪಂಜಿಮೊಗರು ಇವರ ಸಹಯೋಗದಲ್ಲಿ ಮಧ್ಯಾಹ್ನ 2.30 ಗಂಟೆಗೆ “ಸ್ವಚ್ಛ ಸರ್ವೇಕ್ಷಣೆ-2017: ಜಾಗೃತಿ ಅಭಿಯಾನ” ಕಾರ್ಯಕ್ರಮಕ್ಕೆ ಮಹಾನಗರಪಾಲಿಕೆ ಸದಸ್ಯ ದಯಾನಂದ ಶೆಟ್ಟಿ ಚಾಲನೆ ನೀಡಿದರು. ಶಾಲಾ ಮಕ್ಕಳಿಗೆ ಸ್ವಚ್ಛ ಸರ್ವೇಕ್ಷಣೆ ಕುರಿತು ಜಾಗೃತಿ ಮೂಡಿಸಲಾಯಿತು ಮತ್ತು ಬಟ್ಟೆ ಬ್ಯಾಗ್‍ಗಳನ್ನು ವಿತರಿಸಲಾಯಿತು.

Leave a Reply