ಮಹಿಳೆಯರ ಸರಗಳ್ಳತನ ನಾಲ್ವರ ಬಂಧನ

ಮಹಿಳೆಯರ ಸರಗಳ್ಳತನ ನಾಲ್ವರ ಬಂಧನ

ಬಂಟ್ವಾಳ: ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರಗಳನ್ನು ಕಿತ್ತು ಪರಾರಿಯಾಗುತ್ತಿದ್ದ ಪ್ರಕರಣಗಳನ್ನು  ಭೇದಿಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 2 ಬೈಕ್‌ ಹಾಗೂ 2 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಕೊಳ್ಳ ಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೂಷಣ್‌ ಜಿ. ಬೋರಸೆ ತಿಳಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಶನಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಕಣ್ಣೂರು ದೈಯುಂಬು ಎಂಬಲ್ಲಿನ ಬಲ್ಲೂರು ಗುಡ್ಡೆ ನಿವಾಸಿ ನುಮಾನ್‌(20), ಕಣ್ಣೂರು ಬೀಡು ನಿವಾಸಿ ಶಬಾಝ್(19), ಕಣ್ಣೂರು ಶಬಾಝ್(20), ಪುದು ಗ್ರಾಮದ ಕುಂಪನಮಜಲು ನಿವಾಸಿ ತೌಸೀಫ್(23) ಎಂಬವರನ್ನು ಬಂಧಿಸಲಾಗಿದೆ ಎಂದರು.

chain-snaching

ಆರೋಪಿಗಳು ಒಂದು ವರ್ಷದಿಂದ ಬಂಟ್ವಾಳ ವೃತ್ತ ವ್ಯಾಪ್ತಿಯ ಬಂಟ್ವಾಳ ನಗರ, ಗ್ರಾಮಾಂತರ, ವಿಟ್ಲ ಹಾಗೂ ಪುಂಜಾಲಕಟ್ಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿರುವ ಮಹಿ ಳೆಯರ ಕುತ್ತಿಗೆಯಿಂದ ಚಿನ್ನದ ಸರವನ್ನು ಎಳೆದು ಪರಾರಿಯಾಗುತ್ತಿದ್ದರು ಎಂದು ಅವರು ಹೇಳಿದರು. ಶನಿವಾರ ಬೆಳಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬೆಂಜನಪದವಿನಲ್ಲಿ ವಾಹನಗಳನ್ನು ತಪಾ ಸಣೆ ನಡೆಸುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ನುಮಾನ್‌ ಮತ್ತು ತೌಸೀಫ್ನನ್ನು ಬಂಧಿಸಿದ್ದಾರೆ. ಅವರು ನೀಡಿದ ಸುಳಿವಿನಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ ಎಂದರು.

ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿರುವ 2 ಬೈಕ್‌ 1 ಚೂರಿ ಹಾಗೂ 4 ಚಿನ್ನದ ಸರಗಳನ್ನು ವಶಪಡಿ ಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಬಂಟ್ವಾಳ ಉಪವಿಭಾಗದ ಡಿವೈಎಸ್ಪಿರವೀಶ್‌ ಸಿ.ಆರ್‌. ಮಾರ್ಗದರ್ಶನದಂತೆ ಪೊಲೀಸರು ಕಾರ್ಯಾ ಚರಣೆಯಲ್ಲಿ ಭಾಗವಹಿಸಿ ಆರೋಪಿಗಳನ್ನು ಬಂಧಿ ಸಿದ್ದಾರೆ ಎಂದು ಎಸ್ಪಿ ಭೂಷಣ್‌ ಜಿ. ಬೋರಸೆ ತಿಳಿಸಿದರು.

 

1 Comment

Leave a Reply

Please enter your comment!
Please enter your name here