ಮೈಸೂರು ವಿಭಾಗಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಮೈಸೂರು ವಿಭಾಗಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಉಡುಪಿ : ಜಿಲ್ಲಾ ಅಡಳಿತ, ಜಿಲ್ಲಾ ಪಂಚಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಸಹಯೋಗದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2016-17 ನ್ನು , ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಬಲೂನುಗಳನ್ನು ಹಾರಿ ಬಿಡುವ ಮೂಲಕ ಉದ್ಘಾಟಿಸಿದರು.

dasara-sports-meet-00

ನಂತರ ಮಾತನಾಡಿದ ಅವರು, ಉಡುಪಿ ಜಿಲ್ಲೆಯು ಸಂಘಟನೆಗೆ ಪ್ರಸಿದ್ದವಾಗಿದ್ದು, ಜಿಲ್ಲೆಗೆ ನೀಡುವ ಯಾವುದೇ ಕ್ರೀಡಾಕೂಟಗಳನ್ನೂ ಸಹ ಅತ್ಯಂತ ಸುವ್ಯವಸ್ಥಿತವಾಗಿ ನಡೆಸಿಕೊಂಡು ಬರಲಾಗಿದೆ, ಈ ಕ್ರೀಡಾಕೂಟ ಸಹ ಅತ್ಯಂತ ವ್ಯವಸ್ಥಿತವಾಗಿ, ಕ್ರೀಡಾಪಟುಗಳಿಗೆ ಯಾವುದೇ ಕೊರತೆಯಾಗದಂತೆ ನಿರ್ವಹಿಸಲಾಗುವುದು, ಆದರೆ ಕ್ರೀಡಾಪಟುಗಳು ಕ್ರೀಡಾಂಗಣದಲ್ಲಿ ಸ್ವಚ್ಚತೆಯನ್ನು ಕಾಪಾಡುವಂತೆ ದಿನಕರು ಬಾಬು ತಿಳಿಸಿದರು.

ಉಡುಪಿ ಜಿ.ಪಂ. ನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಎಸ್.ಕೋಟ್ಯಾನ್, ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ದಿನೇಶ್ ಪುತ್ರನ್, ಮಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಉಡುಪಿ ತಾಲೂಕು ಕ್ರೀಡಾ ಅಧಿಕಾರಿ ನಾರಾಯಣ ರಾವ್, ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಮಧುಕರ್ ಉಪಸ್ಥಿತರಿದ್ದರು.

ಉಡುಪಿಯ ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು, ಸತೀಶ್ ಚಿತ್ರಪಾಡಿ ನಿರೂಪಿಸಿದರು.

ಸೆಪ್ಟಂಬರ್ 23 ಮತ್ತು 24 ರಂದು ನಡೆಯುವ ಈ ಕ್ರೀಡಾಕೂಟದಲ್ಲಿ ವಿಜೇತರಾದವರು ಅಕ್ಟೋಬರ್ 1 ರಿಂದ ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ದಸರ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.

Leave a Reply

Please enter your comment!
Please enter your name here