ಮ0ಗಳೂರು : ಕರಾವಳಿ ಉತ್ಸವ: ಜಿಲ್ಲಾ ಮಟ್ಟದ ಭಾರ ಎತ್ತುವ ಸ್ಪರ್ಧೆ

ಮ0ಗಳೂರು : ಕರಾವಳಿ ಉತ್ಸವ ಕ್ರೀಡಾಸಮಿತಿ ಹಾಗೂ ದ.ಕ ಜಿಲ್ಲಾ ವೈಟ್‍ಲಿಫ್ಟರ್ಸ್ ಅಸೋಸಿಯೇಶನ್ ಇವರ ಆಶ್ರಯದಲ್ಲಿ ಜ. 27 ಮತ್ತು 28 ರಂದು ಮಂಗಳೂರಿನ ಪುರಭವನದಲ್ಲಿ ಪುರುಷರ ಮತ್ತು ಮಹಿಳೆಯರ ಜಿಲ್ಲಾ ಮಟ್ಟದ ಭಾರ ಎತ್ತುವ ಸ್ಪರ್ಧೆಯು ನಡೆಯಲಿರುವುದು.
ವಿಜೇತ ಸ್ಪರ್ಧಾಳುಗಳಿಗೆ ಪ್ರಶಸ್ತಿ ಪತ್ರ, ಸ್ಮರಣಿಕೆಯೊಂದಿಗೆ ನಗದು ನೀಡಲಾಗುವುದು. ಶಾಲಾ ಕಾಲೇಜುಗಳ ಆಸಕ್ತ ಕ್ರೀಡಾ ಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಸುಮಾರು 28 ತಂಡಗಳ 200 ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ.
ಈ ಕುರಿತು ಮೇಯರ್ ಜೆಸಿಂತಾ ವಿಜಯಾ ಅಲ್ಫ್ರೆಡ್ ಅವರ ಅಧ್ಯ್ಕಷತೆಯಲ್ಲಿ ಬುಧವಾರ ಸಭೆ ನಡೆಯಿತು.
ಕ್ರೀಡಾಕೂಟದಲ್ಲಿ ಭಾಗವಹಿಸಲಿಚ್ಚಿಸುವವರು ಜ. 25ರೊಳಗೆ ಪ್ರವೇಶ ಪತ್ರವನ್ನು ಪುಷ್ಪರಾಜ ಹೆಗ್ಡೆ ( ದೂ. 9845763804) ಇವರಿಗೆ ಕಳುಹಿಸುವಂತೆ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Leave a Reply

Please enter your comment!
Please enter your name here