ಮ0ಗಳೂರು: ಜನವರಿ ಮಾಹೆ ಉದರದರ್ಶಕ ಶಸ್ತ್ರಚಿಕಿತ್ಸಾ ಶಿಬಿರಗಳು

ಮ0ಗಳೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜನವರಿ ಮಾಹೆಯಲ್ಲಿ ವಿವಿಧ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉದರದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ ವನ್ನು ಏರ್ಪಡಿಸಲಾಗಿದೆ. ಜ. 5 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಜ.12 ರಂದು ಸಾರ್ವಜನಿಕ ಆರೋಗ್ಯ ಕೇಂದ್ರ ಪುತ್ತೂರು, ಜ. 14 ರಂದು, ತಾಲೂಕು ಆಸ್ಪತ್ರೆ ಬೆಳ್ತಂಗಡಿ, 17 ರಂದು ಪ್ರಾಥಮಿಕ ಆರೋಗ್ಯಕೇಂದ್ರ ಮಾಣಿ , ಜ. 18 ಪ್ರಾಥಮಿಕ ಆರೋಗ್ಯಕೇಂದ್ರ ಸುರತ್ಕಲ್, ಜ.21 ರಂದು ಸಾರ್ವಜನಿಕ ಆರೋಗ್ಯ ಕೇಂದ್ರ ಉಪ್ಪಿನಂಗಡಿ , ಜ. 22 ರಂದು ತಾ.ಆ. ಪುತ್ತೂರು, 23 ರಂದು ಸಾ.ಆ ಸುಳ್ಯ, 25 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ನಾಟೆಕಲ್, 27 ರಂದು ಸ. ಆರೋಗ್ಯ ಕೇಂದ್ರ ಕಡಬ, 28 ರಂದು ಸ.ಆ.ಕೇಂದ್ರ ಮೂಡಬಿದ್ರೆ ಆರೋಗ್ಯ ಕೇಂದ್ರಗಳಲ್ಲಿ ಉದರದರ್ಶಕ ಶಸ್ತ್ರ ಚಿಕಿತ್ಸೆ ಶಿಬಿರ ನಡೆಯಲಿದೆ. ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆಯೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿರುತ್ತಾರೆ.

Leave a Reply