ಮ0ಗಳೂರು : ತುಳು ಕವನ ರಚನಾ ಕಮ್ಮಟ

ಮ0ಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಗೋವಿಂದದಾಸ ಕಾಲೇಜು, ಸುರತ್ಕಲ್ ಇವರ ಸಹಕಾರದೊಂದಿಗೆ ತುಳು ಕವನ ರಚನಾ ಕಮ್ಮಟವನ್ನು ಮಾ. 4 ರಿಂದ 5 ರವರೆಗೆ ಗೋವಿಂದದಾಸ ಕಾಲೇಜು, ಸುರತ್ಕಲ್, ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಕಮ್ಮಟವನ್ನು ಮಾ.4 ರ ಬೆಳಿಗ್ಗೆ 9.30ಕ್ಕೆ ವಿಶ್ರಾಂತ ಕುಲಪತಿ ಡಾ.ಬಿ.ಎ ವಿವೇಕ ರೈ ಉದ್ಘಾಟಿಸಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಮ್. ಜಾನಕಿ ಬ್ರಹ್ಮಾವರ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಪ್ರಾಂಶುಪಾಲ ಡಾ.ಬಿ.ಮುರಳೀಧರ ರಾವ್ ಇವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಮಾ. 05 ರಂದು ಅಪರಾಹ್ನ 2.30 ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಅಕಾಡೆಮಿಯ ಅಧ್ಯಕ್ಷರಾದ ಎಮ್. ಜಾನಕಿ ಬ್ರಹ್ಮಾವರ ಅಧ್ಯಕ್ಷತೆಯನ್ನು ವಹಿಸಲಿದ್ದು, ಜಾನಪದ ವಿದ್ವಾಂಸರಾದ ಡಾ.ಗಣೇಶ್ ಅಮೀನ್ ಸಂಕಮಾರ್ ಇವರು ಸಮಾರೋಪ ಭಾಷಣ ಮಾಡಲಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನಡೆಸುತ್ತಿರುವ ಈ ಕಮ್ಮಟದಲ್ಲಿ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಮ್ಮಟವನ್ನು ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಇವರ ಪ್ರಕಟಣೆ ತಿಳಿಸಿದೆ.

Leave a Reply

Please enter your comment!
Please enter your name here