ಮ0ಗಳೂರು : ನಕಲಿ ಉದ್ಯೋಗ ಕಾರ್ಡುಗಳನ್ನು ನಿಯಂತ್ರಿಸಲು ನಳಿನ್ ಕುಮಾರ್ ಕಟೀಲ್ ಒತ್ತಾಯ

ಮ0ಗಳೂರು : ಮಹತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನಕಲಿ ಉದ್ಯೋಗ ಕಾರ್ಡುಗಳು ವಿತರಣೆಯಾಗುತ್ತಿದ್ದು, ಅದಕ್ಕೆ ಅವಕಾಶ ಕಲ್ಪಿಸದಂತೆ ಕೇಂದ್ರ ಸರ್ಕಾರವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ.
ಲೋಕಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ನರೇಗಾ ಯೋಜನೆಯಡಿ ನಕಲಿ ಉದ್ಯೋಗ ಕಾರ್ಡುಗಳು ವಿತರಣೆಯಾಗುತ್ತಿರುವ ಅನೇಕ ಪ್ರಕರಣಗಳು ಕಂಡುಬರುತ್ತಿವೆ. ಕೇಂದ್ರ ಗ್ರಾಮೀಣಾಭಿವೃದ್ದಿ ಸಚಿವರು ಇದಕ್ಕೆ ಕಡಿವಾಣ ಹಾಕಬೇಕು. ರಾಜ್ಯ ಸರ್ಕಾರಗಳಿಗೆ ಮಾರ್ಗಸೂಚಿಗಳನ್ನು ಕಳುಹಿಸಬೇಕು. ಬಡಕೂಲಿಕಾರ್ಮಿಕರಿಗೆ ಕಡ್ಡಾಯವಾಗಿ 100 ದಿನಗಳ ಉದ್ಯೋಗವನ್ನು ನೀಡಬೇಕು. ಈ ಯೋಜನೆಯಡಿ ಉದ್ಯೋಗ ದೊರಕದಿದ್ದ ನಿರುದ್ಯೋಗಿಗಳಿಗೆ ಭತ್ಯೆಯನ್ನು ನೀಡಬೇಕು ಎಂದು ಸಂಸದರು ಒತ್ತಾಯಿಸಿದರು.
ಈ ಯೋಜನೆಯಡಿ ರಾಷ್ಟ್ರ ಮಟ್ಟ, ರಾಜ್ಯ , ವಲಯ ಮಟ್ಟದಲ್ಲಿ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದೆ. ಕಾಲಕಾಲಕ್ಕೆ ಮಾರ್ಗ ಸೂಚಿಗಳನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗುತ್ತಿದೆ. ಈ ಯೋಜನೆಯಡಿ ನೊಂದಾಯಿತ ಕೆಲಸ ಮಾಡಲು ಇಚ್ಚಿಸುವ ಕೂಲಿಕಾರ್ಮಿಕರಿಗೆ 100 ದಿನಗಳ ಅವಧಿಯ ಕೆಲಸವನ್ನು ನೀಡಲಾಗುತ್ತಿದೆ. ಕೂಲಿಕಾರ್ಮಿಕರಿಗೆ ಜಾಗೃತಿಯನ್ನೂ ಮೂಡಿಸಲಾಗುತ್ತಿದೆ. 1.65 ಕೋಟಿ ಮಾನವ ದಿನಗಳನ್ನು ಉತ್ಪಾದಿಸಲಾಗಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರು ಉತ್ತರಿಸಿದ್ದಾರೆ.

Leave a Reply

Please enter your comment!
Please enter your name here