ರಾಜ್ಯ ಮಟ್ಟದ ಕ್ರಿಕೆಟ್ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಚಾಂಪಿಯನ್

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಪತ್ರಕರ್ತರ ಎರಡು ದಿನಗಳ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಂಡ ಚಾಂಪಿಯನ್‍ಶಿಪ್ ಪಡೆದುಕೊಂಡಿದೆ.

mangalore-press-club-cricket

ಮೈಸೂರು ನಗರ ಪೋಲಿಸ್ ಆಯುಕ್ತ ಬಿ. ದಯಾನಂದ್ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ 50 ಸಾವಿರ ರೂಪಾಯಿ ಹಾಗೂ ಟ್ರೋಫಿಯನ್ನು ಒಳಗೊಂಡಿದೆ. ಮಂಜುನಾಥ್ ಭಟ್ ಪಂದ್ಯ ಪುರುಷೋತ್ತಮ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು. ತಂಡದ ಕಪ್ತಾನ ರಾಜೇಶ್ ರಾವ್ ಪುತ್ತೂರು, ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ತಂಡದ ಸದ್ಯಸರು ಉಪಸ್ಥಿತರಿದ್ದರು.

ಕಳೆದ ವರ್ಷ ಮಡಿಕೇರಿಯಲ್ಲಿ ನಡೆದ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿಯೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತ್ತು. ವಿಜೇತ ತಂಡಕ್ಕೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನಾಥ ಶೆಟ್ಟಿ ಬಾಳ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Please enter your comment!
Please enter your name here