ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ

117

ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ

ಬಂಟ್ವಾಳ: ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಕಲ್ಕಡ್ಕ ಗೋಳ್ತಮಜಲು ಎಂಬಲ್ಲಿ ಸೋಮವಾರ ಸಂಭವಿಸಿದೆ.

ಮೃತ ಯುವಕನನ್ನು ಕಲ್ಕಡ್ಕ ನಿವಾಸಿ ದಿವಂಗತ ವೆಂಕಪ್ಪ ಗೌಡ ಅವರ ಪುತ್ರ ಪುರಂದರ (28) ಎಂದು ಗುರುತಿಸಲಾಗಿದೆ.

ಮೃತ ಯುವಕ ಮಾರುತಿ ಶೋರೂಮ್ ಹಾಗೂ ಸರ್ವಿಸ್ ಸ್ಟೇಶನ್ ನ್ನಲ್ಲಿ ಕೆಲಸ ಮಾಡುತ್ತಿದ್ದು ವಿಪರೀತ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಎನ್ನಲಾಗಿದೆ. ಭಾನುವಾರ ತಡ ರಾತ್ರಿವರೆಗೂ ವಿಟ್ಲ ಜಾತ್ರೆಯಲ್ಲೂ ಪಾಲ್ಗೊಂಡಿದ್ದು ಸೋಮವಾರ ರೈಲ್ವೆ ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದು ಬಂದಿಲ್ಲ.

ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.