ವಳಚ್ಚಿಲಿನಲ್ಲಿ ಭೀಕರ ರಸ್ತೆ ಅಫಘಾತ – ಐವರು ಸ್ಥಳದಲ್ಲೇ ಸಾವು

ಮಂಗಳೂರು: ನಗರದ ಹೊರವಲಯದ ವಳಚ್ಚಿಲ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಮೃತರನ್ನು ವಳಚ್ಚಿಲ್ ನಿವಾಸಿ ಮಹಮ್ಮದ್ ನಝೀರ್ (21), ಅಹ್ಮದ್ ಹುಸೈನ್ (50), ಮಹಮ್ಮದ್ ಹನೀಫ್ (21), ಮಹಮ್ಮದ್ ಹೀನಾಝ್ (22) ಎಂದು ಗುರುತಿಸಲಾಗಿದೆ.
ಬಿಸಿ ರೋಡ್ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿಯು ವಳಚ್ಚಿಲ್ ಬಳಿಯ ಯಶಸ್ವಿ ಹಾಲ್ ಬಳಿ ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ, ವಿರುದ್ದ ದಿಕ್ಕಿನ ರಸ್ತೆಯ ಮೂಲಕ ಆಗಮಿಸುತ್ತಿದ್ದ ಮಾರುತಿ ಕಾರು ಹಾಗೂ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ.
ಅಫಘಾತದದ ರಭಸಕ್ಕೆ ರಿಕ್ಷಾ ಕಂಟೈನರ್ ಅಡಿಗೆ ಸಿಲುಕಿ ನಜ್ಜುಗುಜ್ಜಾಗಿದೆ. ಪ್ರಾಥಮಿಕ ವರದಿಯ ಪ್ರಕಾರ ಐದು ಮಂದಿ ಸ್ಥಳದಲ್ಲೇ ಸಾವನಪ್ಪಿದ್ದು, ಇತರ ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಘಟನೆಗೆ ಕಂಟೈನರ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದ್ದು, ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

Leave a Reply