ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪಿ ಸೆರೆ

ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪಿ ಸೆರೆ

ಮಂಗಳೂರು: ನಗರದ್ಯಾದಂತ ಯುವಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಆತನ ವಶದಿಂದ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಬಂಧಿತನನ್ನು ಅಡ್ಯಾರು ನಿವಾಸಿ ಅಬ್ದುಲ್ ಜಬ್ಬಾರ್ ಯಾನೆ ಮಂಗ ಜಬ್ಬಾರೆ (24) ಎಂದು ಗುರುತಿಸಲಾಗಿದೆ.

jabbar-manga-ganja20160701

ಮಂಗಳೂರು ನಗರದ ಅಡ್ಯಾರ್ ಸಹ್ಯಾದ್ರಿ ಕಾಲೇಜು ಎದುರುಗಡೆ ಕಪ್ಪು ಬಣ್ಣದ ಸುಜುಕಿ ಅಕ್ಸೆಸ್ ಸ್ಕೂಟರ್ ನಲ್ಲಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಅಬ್ದುಲ್ ಜಬ್ಬಾರ್ ವಶಕ್ಕೆ ಪಡೆದುಕೊಂಡು ಆತನಿಂದ ಸುಮಾರು 30,000/- ಮೌಲ್ಯದ 1. ಕೆಜಿ ಗಾಂಜಾವನ್ನು. ಮೊಬೈಲ್ ಫೋನ್ ಹಾಗೂ ಗಾಂಜಾವನ್ನು ಮಾರಾಟ ಮಾಡಲು ಉಪಯೋಗಿಸುತ್ತಿದ್ದ ಸುಝುಕಿ ಅಕ್ಸೆಸ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯಿಂದ ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 90,000/- ಆಗಬಹುದು. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಆರೋಪಿ ಅಬ್ದುಲ್ ಜಬ್ಬಾರ್ @ ಮಂಗ ಜಬ್ಬಾರ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಟ್ಟು 2 ಪ್ರಕರಣಗಳು ದಾಖಲಾಗಿರುತ್ತದೆ.

ಸಿ.ಸಿ.ಬಿ ಘಟಕದ ಇನ್ಸಪೆಕ್ಟರ್ ವೆಲೆಂಟೈನ್ ಡಿ’ಸೋಜ ಮತ್ತು ಸಬ್ ಇನ್ಸಪೆಕ್ಟರ್ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.

3 Comments

  1. I had guessed the profile of this guy even before I clicked on the link!!!! How is it possible?? smiles….

    • I had guessed the profile of this guy EVEN before I clicked on the link!!! How is it possible?? Smiles…. – RampaNNA

      Howwjjit pocchibble? Arre Rampa, with you, ANYTHING is possible.

      Zimble! See, you must have brought yourself a Crystal Ball (USD 0.99 only, made in China of course AND a promo – buy 1 get 1 FREE) at the local Mom & Pop store and must have been looking deep into it the whole night.

Leave a Reply

Please enter your comment!
Please enter your name here