ವೆನ್ಲಾಕ್ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ಯುವ ಜೆಡಿಎಸ್ ಜಿಲ್ಲಾಧಿಕಾರಿಗೆ ಮನವಿ

ವೆನ್ಲಾಕ್ ಆಸ್ಪತ್ರೆಯ ಅವ್ಯವಸ್ಥೆ  ಸರಿಪಡಿಸುವಂತೆ ಒತ್ತಾಯಿಸಿ ಯುವ ಜೆಡಿಎಸ್ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು: ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ದಕ ಜಿಲ್ಲಾ ಯುವ ಜನತಾದಳದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿಗಳ ಪರವಾಗಿ ಅಪರ ಜಿಲ್ಲಾಧಿಕಾರಿ ಕುಮಾರ್ ಹಾಗೂ ಜಿಲ್ಲಾ ಆರೋಗ್ಯಧಿಕಾರಿ ಡಾ ರಾಜೇಶ್ವರಿ ಮನವಿ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಯುವ ಜನತಾದಳದ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರು ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯು ಬಹು ವರುಷದ ಹಳೆಯದಾದ್ದರೂ ಕೂಡ ಇಲ್ಲಿ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಉತ್ತರಕನ್ನಡ, ಶಿವಮೊಗ್ಗ, ಹಾಸನ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯ ಕೇರಳದ ಕಾಸರಗೋಡು, ಕಣ್ಣೂರು ಜಿಲ್ಲೆಗಳಿಂದ ಹೊರರೊಗಿಗಳು ಆಗಮಿಸುತ್ತಾರೆ. ಅದರಲ್ಲಿ ಕೆಲ ಹೊರರೋಗಿಗಳು ಹಾಗೂ ಒಳ ರೋಗಿಗಳು ವಿವಿಧ ಕಾಯಿಲೆಗಳಿಂದ ಇರುವ ರೋಗಿಗಳು ಆಗಮಿಸುತ್ತಾರೆ. ಆದರೆ ಜಿಲ್ಲಾ ಆಸ್ಪತ್ರೆಯಲ್ಲಿ ಯಾವುದೇ ಸರಿಯಾದ ವ್ಯವಸ್ಥೆಯಿಲ್ಲದೆ ರೋಗಿಗಳು ಪರದಾಡುವ ಪರಸ್ಥಿತಿ ಉಂಟಾಗಿದೆ.

ಇಲ್ಲಿ ಬಹಳ ಜೀವ ಮರಣ ಸ್ಥಿತಿಯಲ್ಲಿ ಅನೇಕ ರೋಗಿಗಳು ಆಗಮಿಸುತ್ತಾರೆ. ಈ ಸಂಧರ್ಭದಲ್ಲಿ ತುರ್ತು ನಿಗಾ ಘಟಕದಲ್ಲಿ ಕೇವಲ 11 ರೋಗಿಗಳು ಇರುವ ಬೆಡ್ ಮಾತ್ರ ಇರುವುದಾಗಿ ಆಸ್ಪತ್ರೆಯ ಸಿಬಂದಿಗಳು ತಿಳಿಸುತ್ತಾರೆ. ಇದರಿಂದ ಬಡ ರೋಗಿಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲು ಉತ್ತೇಜನ ನೀಡುವಂತೆ ಕಾಣಿಸುತ್ತದೆ. ಆದ್ದರಿಂದ ತಕ್ಷಣ ಇನ್ನೂ ಹೆಚ್ಚಿನ ಬೆಡ್ ಗಳನ್ನು ವಿಸ್ತರಿಸಬೇಕು. ಹಾಗೂ ಹೆಚ್ಚಿನ ಸಿಬಂದಿಗಳನ್ನು ನಿಯೋಜಿಸಬೇಕು. ಸರಿಯಾದ ಸಮಯಕ್ಕೆ ರೋಗಿಗಳ ಚಿಕಿತ್ಸೆಯನ್ನು ನೀಡಬೇಕು. ರೋಗಿಗಳೊಂದಿಗೆ ಸಭ್ಯವಾಗಿ ವರ್ತಿಸಬೇಕು. ಮತ್ತು ಸಿಟಿ, ಎಂಆರ್ ಐ, ಕ್ಷ ಕಿರಣ, ಹೃದಯ ಸಂಬಂಧಿ ಕಾಯಿಲೆ, ಸಕ್ಕರೆ ಕಾಯಿಲೆ, ಕಿಡ್ನಿ ಸಂಬಂಧೀಸಿದ ಕಾಯಿಲೆ, ಕ್ಯಾನ್ಸರಿಗೆ ಸಂಬಂಧಿಸಿದ ಮತ್ತು ಎಲ್ಲಾ ಕಾಯಿಗೆಗಳಿಗೆ ಸಂಬಂಧಿಸಿದ ಯಂತ್ರೊಪಕರಣಗಳನ್ನು ಮತ್ತು ಔಷದಿಗಳನ್ನು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರಲ್ಲಿ ಒತ್ತಾಯಿಸಿದರು. ತಪ್ಪಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂಬ ಎಚ್ಚರಿಕೆ ನೀಡಿದರು.

ನಿಯೋಗದಲ್ಲಿ ರಾಜ್ಯ ನಾಯಕರಾದ ಶ್ರೀನಾಧ್ ರೈ, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಮಧುಸೂಧನ ಗೌಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕಿಶೋರ್ ಶೆಟ್ಟಿ ಅರಸಿನಮಕ್ಕಿ ಜಿಲ್ಲಾ ಕಾರ್ಯದರ್ಶಿ ತೇಜಸ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಹಾಗೂ ನಿಖಿರ್ ರಾಜ್ ಉಪಸ್ಥಿತರಿದ್ದರು.

Leave a Reply

Please enter your comment!
Please enter your name here