ಶಿರಾಡಿ ತಾಯಿ – ಮಗು ಕೊಲೆ ಪ್ರಕರಣದ ಅಪರಾಧಿಗೆ ಮರಣದಂಡನೆ

ಶಿರಾಡಿ ತಾಯಿ – ಮಗು ಕೊಲೆ ಪ್ರಕರಣದ ಅಪರಾಧಿಗೆ ಮರಣದಂಡನೆ
ಮಂಗಳೂರು: ಎಂಟು ವರ್ಷದ ಹಿಂದೆ ಪುತ್ತೂರು ತಾಲೂಕಿನ ಶಿರಾಡಿಯಲ್ಲಿ ನಡೆದ ತಾಯಿ ಮತ್ತು ಮಗುವಿನ ಕೊಲೆ ಆರೋಪ ಎದುರಿಸುತ್ತಿದ್ದ ಜಯೇಶ್ ಗೆ ಮರಣದಂಡನೆ ಶಿಕ್ಷೆಯನ್ನು ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯ ತೀರ್ಪು ನೀಡಿದೆ.
ಶಿರಾಡಿ ಸಮೀಪದ ಪೊಲ್ಯೊಟ್ಟು ಎಂಬಲ್ಲಿನ ನಿವಾಸಿ ಆರೋಪಿ ಜಯೇಶ್ ಸಿರಿಬಾಗಿಲು ಗ್ರಾಮದ ಪೊಲ್ಯೋಟ್ಟು ಎಂಬಲ್ಲಿನ ನಿವಾಸಿ ತನ್ನ ದೊಡ್ಡಪ್ಪನ ಮಗ ರೋಹಿತ್ ಯಾನೆ ಲವ ಅವರ ಪತ್ನಿ ಸೌಮ್ಯ ಅವರ ಕುತ್ತಿಗೆಗೆ ಬಟ್ಟೆಯನ್ನು ಸುತ್ತಿ ಮಾರಕಾಯುಧದಿಂದ ತಿವಿದು ಕೊಲೆಗೈದು ಅವರ ಕತ್ತಿನಲ್ಲಿದ್ದ 10ಗ್ರಾಂ ಚಿನ್ನದ ಮಾಂಗಲ್ಯ ಸರ ಮತ್ತು ಕಿವಿಯಲ್ಲಿದ್ದ ಬೆಂಡೋಲೆಯನ್ನು ದೋಚಿದ್ದಲ್ಲದೆ ಸೌಮ್ಯರ ಪುತ್ರ 3 ವರ್ಷ ಪ್ರಾಯದ ಜಿಷ್ಣುವಿಗೂ ಚೂರಿಯಿಂದ ತಿವಿದು ಬರ್ಬರವಾಗಿ ಕೊಲೆ ಮಾಡಿ ಕೇರಳಕ್ಕೆ ಪರಾರಿಯಾಗದ್ದ. ಚಿನ್ನಾಭರಣಕ್ಕಾಗಿ ತನ್ನ ಪತ್ನಿ ಮಗುವನ್ನು ಕೊಲೆಮಾಡಲಾಗಿದೆ ಎಂದು ಸೌಮ್ಯರ ಪತಿ ಲೋಹಿತ್ ದೂರು ನೀಡಿದ್ದರು.
ಸೆಕ್ಷನ್ 450, 392 ಹಾಗೂ 302 ಪ್ರಕಾರ ಆರೋಪಿ ಮರಣದಂಡನೆಗೆ ಯೋಗ್ಯವಾದ ಅಪರಾಧ ಎಸಗಿಸಿದ್ದಾನೆ ಎಂದು ತೀರ್ಮಾನಿಸಿರುವ ನ್ಯಾಯಲಯ ಆರೋಪಿಗೆ ಈ ಶಿಕ್ಷೆ ವಿಧಿಸಿದೆ.

Leave a Reply