ಶಿರ್ವ ಡೊನ್ ಬೊಸ್ಕೊ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ರಾಜ್ಯಕ್ಕೆ ಆಯ್ಕೆ

ಶಿರ್ವ ಡೊನ್ ಬೊಸ್ಕೊ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ರಾಜ್ಯಕ್ಕೆ ಆಯ್ಕೆ

ಉಡುಪಿ: ಕುದಿ ವಿಷ್ಣುಮೂರ್ತಿ ಪ್ರೌಢಶಾಲೆಯಲ್ಲಿ ಜರಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶಿರ್ವ ಡೊನ್‍ಬೊಸ್ಕೋ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

don-bsco-student-shirva

ಹಿಂದಿ ಭಾಷಣದಲ್ಲಿ ಶಿರ್ವ ಡೊನ್‍ಬೊಸ್ಕೋ ಆಂಗ್ಲ ಮಾಧ್ಯಮ ಶಾಲೆಯ ಕು|ಐರಲ್ ನಜ್ರತ್ ಪ್ರಥಮ ಸ್ಥಾನ ಪಡೆದು ತುಮಕೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, ಛದ್ಮವೇಷ ಸ್ಪರ್ಧೆಯಲ್ಲಿ ವಿನ್ಸ್ಟ್‍ನ್ ಫೆರ್ನಾಂಡಿಸ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Leave a Reply

Please enter your comment!
Please enter your name here