ಶ್ರೀಮತಿ ಶೆಟ್ಟಿ ಕೊಲೆ : ದಂಪತಿಯನ್ನು ಬಂಧಿಸಿದ ಪೊಲೀಸರು

ಶ್ರೀಮತಿ ಶೆಟ್ಟಿ ಕೊಲೆ : ದಂಪತಿಯನ್ನು ಬಂಧಿಸಿದ ಪೊಲೀಸರು

ಮಂಗಳೂರು: ನಗರದ ಅಮರ್ ಆಳ್ವಾ ರಸ್ತೆ ನಿವಾಸಿ ಶ್ರೀಮತಿ ಶೆಟ್ಟಿ (35) ಅವರನ್ನು ಬರ್ಬರವಾಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಅತ್ತಾವರ ನಿವಾಸಿಗಳಾದ ಜೋನಸ್ ಜೂಲಿನ್ ಸ್ಯಾಮ್ದನ್ ಮತ್ತು ಆತನ ಪತ್ನಿ ವಿಕ್ಟೋರಿಯಾ ಮಥಾಯಸ್ ಎಂದು ಗುರುತಿಸಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು, ಹಣಕಾಸು ವ್ಯವಹಾರದ ವೈಷಮ್ಯದಿಂದ ಕೊಲೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಲು ಹೋದ ವೇಳೆ ಆತ ಆತ್ಮಹತ್ಯೆಗೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪತ್ನಿ ಕೊಲೆಗೆ ಸಹಕಾರ ನೀಡಿರುವ ಆರೋಪವಿದ್ದು, ಅವರ ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಶ್ರೀಮತಿ ಶೆಟ್ಟಿಯ ಕಾಲು ಕದ್ರಿ ಪಾರ್ಕ್ ನ ಬಳಿ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.