ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತ ಕಟೌಟ್ ಅಳವಡಿಕೆ ದೂರು ದಾಖಲು

  ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತ ಕಟೌಟ್ ಅಳವಡಿಕೆ ದೂರು ದಾಖಲು

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತ ಕಟೌಟ್ ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡಿರುವ ಕುರಿತು ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿ 25 ವರ್ಷಗಳ ಸೇವೆಯ ರಜತ ಸಂಭ್ರಮ ಹಾಗೂ ನವೋದಯ ಸ್ವಸಹಾಯ ಸಂಘಗಳ ವಿಂಶತಿ ಸಮಾವೇಶದ  ಆಯೋಜಕರ ವಿರುದ್ದ ಮಂಗಳೂರು ಮಹಾನಗರ ಪಾಲಿಕೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿ 25 ವರ್ಷಗಳ ಸೇವೆಯ ರಜತ ಸಂಭ್ರಮ ಹಾಗೂ ನವೋದಯ ಸ್ವಸಹಾಯ ಸಂಘಗಳ ವಿಂಶತಿ ಸಮಾವೇಶದ  ಕಾರ್ಯಕ್ರಮವು   ಜನವರಿ 19 ರಂದು ಮಂಗಳೂರು ನಗರದ ಫುಟ್ ಬಾಲ್ ಮೈದಾನ ಹಾಗೂ ನೆಹರೂ ಮೈದಾನದಲ್ಲಿ ನಡೆದಿದ್ದು, ಈ ಕಾರ್ಯಕ್ರಮದ ಪ್ರಯುಕ್ತ   ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ರಸ್ತೆ  ಜಂಕ್ಷನ್ ಗಳಲ್ಲಿ, ಸಾರ್ವಜನಿಕರು ಓಡಾಡುವ  ಸ್ಥಳಗಳಲ್ಲಿ ಮತ್ತು ರಸ್ತೆ ವಿಭಾಜಕಗಳಲ್ಲಿ ಅನಧಿಕೃತ ಕಟೌಟ್ ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿರುವುದರಿಂದ ಕಾರ್ಯಕ್ರಮದ ಆಯೋಜಕರ ವಿರುದ್ದ   ಮಂಗಳೂರು ಮಹಾ ನಗರ ಪಾಲಿಕೆಯವರು ನೀಡಿದ ದೂರಿನಂತೆ  ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

1 Comment

Comments are closed.