ಸುಬ್ರಹ್ಮಣ್ಯ: ಕೆಮ್ಮಾರ ಬಳಿ ಕಾರು ಬೈಕ್ ಡಿಕ್ಕಿ ; ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಸುಬ್ರಹ್ಮಣ್ಯ: ಕಾರು ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಮ್ಮಾರ ಎಂಬಲ್ಲಿ ಗುರುವಾರ ಸಂಭವಿಸಿದೆ.

ಮೃತ ಸವಾರನನ್ನು ಕಡಬದ ಕುಟ್ರಾಪ್ಪಾಡಿ ನಿವಾಸಿ ಬಿನಯ್‌ (39) ಎಂದು ಗುರುತಿಸಲಾಗಿದೆ. ಬಿನಯ್‌ ಅವರು ಉಪ್ಪಿನಂಗಡಿಯಿಂದ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಕಾರು ಢಿಕ್ಕಿಯಾ ಗಿತ್ತು. ಢಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಬಿನಯ್‌ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಬೆಂಗಳೂರು ಉಪ್ಪಾರಪೇಟೆಯ ಕುಟುಂಬವು ಸುಬ್ರಹ್ಮಣ್ಯ ಕ್ಷೇತ್ರದರ್ಶನ ಮುಗಿಸಿ ಬಳಿಕ ಕೊಲ್ಲೂರಿಗೆ ಹೋಗುತ್ತಿದ್ದರು ಎನ್ನಲಾಗಿದೆ.

ಅಪಘಾತ ಸಂಭವಿಸಿದ ಸಂದರ್ಭ ಸ್ಥಳದಲ್ಲಿದ್ದ ನಾಗರಿಕರು ಹಾಗೂ ಕಾರಿನಲ್ಲಿದ್ದವರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ವೃತ್ತಿಯಲ್ಲಿ ಸಿವಿಲ್‌ ಎಂಜಿನಿ ಯರ್‌ ಆಗಿದ್ದ ಬಿನಯ್‌ ಅವರ ಪತ್ನಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಓರ್ವ ಪುತ್ರನಿದ್ದಾನೆ. ಪುತ್ತೂರು ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Leave a Reply