ಸ್ಪರ್ಧಾತ್ಮಕವಾದ ಜಗತ್ತು ಒಳ್ಳೆಯದನ್ನು ಆರಿಸಿಕೊಳ್ಳಿ – ಪಿಎಸ್‍ಐ ಅನಂತಪದ್ಮನಾಭ

ಬ್ರಹ್ಮಾವರ : ಜಗತ್ತು ಇಂದು ಸ್ಪರ್ಧಾತ್ಮಕವಾಗಿದೆ. ಇದರಲ್ಲಿ ಓಳ್ಳೆಯದು, ಕೆಟ್ಟದ್ದು ಎರಡೂ ಇದೆ. ಅದರಲ್ಲಿ ಒಳ್ಳೆಯದನ್ನು ಆರಿಸಿಕೊಂಡು ಜೀವನವನ್ನು ರೂಪಿಸಿಕೊಳ್ಳುವಂತೆ ಬ್ರಹ್ಮಾವರ ಪೋಲೀಸ್ ಠಾಣೆಯ ಪೋಲೀಸ್ ಉಪನಿರೀಕ್ಷಕ ಅನಂತಪದ್ಮನಾಭ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಬ್ರಹ್ಮಾವರ ಕ್ರಾಸ್‍ಲ್ಯಾಂಡ್ ಪದವಿ ಕಾಲೇಜಿನಲ್ಲಿ ಅಂತಿಮ ಬಿ.ಕಾಂ ವಿದ್ಯಾರ್ಥಿಗಳು ಆಯೋಜಿಸಿದ್ದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಅಭಿವರ್ತ 2016ನ್ನು ಉದ್ಘಾಟಿಸಿ ಅವರು ಮಾತನಾಡಿದರು.

commerce-fest-bvr-20160410-02 commerce-fest-bvr-20160410-01

ಜೀವನದಲ್ಲಿ ಸಂಪತ್ತು ಮುಖ್ಯವಲ್ಲ. ಅದನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವುದರ ಬಗ್ಗೆ ತಿಳುವಳಿಕೆ ಅಗತ್ಯ. ಜೀವನದಲ್ಲಿ ಗುರಿ ಮುಖ್ಯ. ಇದರಿಂದ ಯಶಸ್ಸು ಗಳಿಸಲು ಸಾಧ್ಯ ಎಂದು ಅವರು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಪೆÇ್ರ.ಸ್ಯಾಮುಯೆಲ್ ಕೆ ಸ್ಯಾಮುಯೆಲ್ ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ಉಪಪ್ರಾಂಶುಪಾಲೆ ಪೆÇ್ರ.ಎಲಿಜೆಬೆತ್ ರಾಯ್, ಕಾರ್ಯಕ್ರಮದ ಸಂಯೋಜಕಿ ಸ್ಟಿನ್ನಿ ಪಿ, ವಿದ್ಯಾರ್ಥಿ ಸಂಯೋಜಕರಾದ ಅರ್ಚನಾ, ಶ್ವೇತಾ, ಸುನಿಲ್ ಕುಮಾರ್, ವಿದ್ಯಾರ್ಥಿ ನಾಯಕ ರೋನ್ವಿಲ್ ಡಿಸೋಜಾ, ಕಾರ್ಯದರ್ಶಿ ರಿಷಾನಾ ಉಪಸ್ಥಿತರಿದ್ದರು.
ಚೈತ್ರಾ ಸ್ವಾಗತಿಸಿದರು. ದಿವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Leave a Reply

Please enter your comment!
Please enter your name here