ಸ್ಮಾರ್ಟ್ ಸಿಟಿ ಯೋಜನೆಗೆ ಮಂಗಳೂರು – ನಳಿನ್‍ಕುಮಾರ್ ಕಟೀಲ್ ಅಭಿನಂದನೆ

Spread the love

ಸ್ಮಾರ್ಟ್ ಸಿಟಿ ಯೋಜನೆಗೆ ಮಂಗಳೂರು – ನಳಿನ್‍ಕುಮಾರ್ ಕಟೀಲ್ ಅಭಿನಂದನೆ

ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಗೆ ಮಂಗಳೂರು ನಗರವನ್ನು ಆಯ್ಕೆ ಮಾಡಿರುವ ಕೇಂದ್ರ ಸರ್ಕಾರಕ್ಕೆ ಸಂಸದ ನಳಿನ್‍ಕುಮಾರ್ ಕಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ಮಾರ್ಟ್ ಸಿಟಿಗೆ ಆಯ್ಕೆಯಾದ ನೂರು ನಗರಗಳಲ್ಲಿ ಮಂಗಳೂರು ನಗರ ಸೇರ್ಪಡೆಯಾಗಿತ್ತು. ಪ್ರಥಮ ಹಂತದಲ್ಲಿ 20 ನಗರಗಳ ಪೈಕಿ ಮಂಗಳೂರು ಆಯ್ಕೆಯಾಗುವ ನಿರೀಕ್ಷೆ ಇತ್ತು. ಆದರೆ ಪ್ರಸ್ತಾವನೆಯಲ್ಲಿ ಕೆಲವು ನ್ಯೂನತೆ ಇದ್ದ ಕಾರಣ ಸಾಧ್ಯವಾಗಿರಲಿಲ್ಲ. ಎರಡನೇ ಹಂತದಲ್ಲಿ ಮಂಗಳೂರನ್ನು ಆಯ್ಕೆ ಮಾಡುವ ಬಗ್ಗೆ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಭರವಸೆ ನೀಡಿದ್ದರು. ಇದೀಗ ಮಂಗಳೂರು ನಗರದ ಪ್ರಸ್ತಾವನೆಗೆ ಸ್ಪಂದನೆ ದೊರೆತಿರುವುದು ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಯಿಂದ ನಗರದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗಲಿದೆ. ಯೋಜನೆಯನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಹಕರಿಸಬೇಕು. ಕೇಂದ್ರ ಸರ್ಕಾರದ ಈ ದೂರದೃಷ್ಟಿತ್ವದ ಯೋಜನೆಯಿಂದ ಭವಿಷ್ಯದಲ್ಲಿ ಮಂಗಳೂರು ನಗರದ ಸಮಗ್ರ ಚಿತ್ರಣ ಬದಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ಸ್ಮಾರ್ಟ್ ಸಿಟಿ ಆಯ್ಕೆಗೆ ಬಿಜೆಪಿ ಅಭಿನಂದನೆ

ಸ್ಮಾರ್ಟ್ ಸಿಟಿಗಳನ್ನು ನಿರ್ಮಿಸುವ 2ನೇ ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಮಂಗಳೂರು ನಗರ ಆಯ್ಕೆಯಾಗಿರುವುದಕ್ಕೆ ಭಾರತೀಯ ಜನತಾ ಪಾರ್ಟಿ ಕೇಂದ್ರ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತದೆ. ಈ ಯೋಜನೆಯನ್ನು ಜಾರಿಗೆ ತಂದ ನಮ್ಮ ನೆಚ್ಚಿನ ಪ್ರಧಾನಿ ಸನ್ಮಾನ್ಯ ನರೇಂದ್ರ ಮೋದಿಯವರಿಗೆ, ಈ ಬಗ್ಗೆ ಮುತುವರ್ಜಿ ವಹಿಸಿ ಕೆಲಸ ಮಾಡಿದ ಕೇಂದ್ರ ನಗರಾಭಿವೃದ್ಧಿ ಸಚಿವರಾದ ಸನ್ಮಾನ್ಯ ವೆಂಕಯ್ಯ ನಾಯ್ಡು ಅವರಿಗೆ ಹಾಗೂ ಮಂಗಳೂರಿನ ನೆಚ್ಚಿನ ಸಂಸದರಾದ ಸನ್ಮಾನ್ಯ ನಳಿನ್ ಕುಮಾರ್ ಕಟೀಲ್‍ರವರಿಗೆ ಹಾಗೂ ಸಂಬಂಧಪಟ್ಟ ಇಲಾಖೆಗೆ ಈ ಸಂದರ್ಭದಲ್ಲಿ ಮಂಗಳೂರಿನ ಜನತೆಯ ಪರವಾಗಿ ಬಿಜೆಪಿ ನಗರ ದಕ್ಷಿಣ ಅಧ್ಯಕ್ಷರಾದ ವೇದವ್ಯಾಸ ಕಾಮತ್ ಕೃತಜ್ಞತೆಯನ್ನು ಸಲ್ಲಿಸಿರುತ್ತಾರೆ.

ದೇಶದಲ್ಲಿ 100 ಸ್ಮಾರ್ಟ್ ಸಿಟಿಗಳನ್ನು ನಿರ್ಮಿಸುವ ಸನ್ಮಾನ್ಯ ನರೇಂದ್ರ ಮೋದಿಯವರ ಕನಸಿನ ಯೋಜನೆಯ 2ನೇ ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಮಂಗಳೂರು ನಗರ ಆಯ್ಕೆಯಾಗಿರುವುದಕ್ಕೆ ಸಂತೋಷಪಡುತ್ತೇವೆ. ಸ್ಮಾರ್ಟ್ ಸಿಟಿಯಿಂದ ಮಂಗಳೂರಿನ ಮೂಲಭೂತ ಸೌಕರ್ಯಗಳಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಉದ್ಯೋಗ ಅವಕಾಶಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಲಿದ್ದು, ಇದು ಭವಿಷ್ಯದಲ್ಲಿ ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಲಿದೆ. ಈ ಯೋಜನೆಯನ್ನು ಜಾರಿಗೆ ತಂದ ನಮ್ಮ ನೆಚ್ಚಿನ ಪ್ರಧಾನಿ ಸನ್ಮಾನ್ಯ ನರೇಂದ್ರ ಮೋದಿಯವರಿಗೆ, ಈ ಬಗ್ಗೆ ಮುತುವರ್ಜಿ ವಹಿಸಿ ಕೆಲಸ ಮಾಡಿದ ಕೇಂದ್ರ ನಗರಾಭಿವೃದ್ಧಿ ಸಚಿವರಾದ ಸನ್ಮಾನ್ಯ ವೆಂಕಯ್ಯ ನಾಯ್ಡು ಅವರಿಗೆ ಹಾಗೂ ಮಂಗಳೂರಿನ ನೆಚ್ಚಿನ ಸಂಸದರಾದ ಸನ್ಮಾನ್ಯ ನಳಿನ್ ಕುಮಾರ್ ಕಟೀಲ್‍ರವರಿಗೆ ಈ ಸಂದರ್ಭದಲ್ಲಿ ಮಂಗಳೂರಿನ ಜನತೆಯ ಪರವಾಗಿ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ.


Spread the love