ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆ

ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆ

ಉಡುಪಿ: ಆಗಸ್ಟ್ 15ರಂದು ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವವನ್ನು ಬೀಡಿನಗುಡ್ಡೆ ಬಯಲು ರಂಗಮಂದಿರದಲ್ಲಿ ಆಚರಿಸಲು ಜಿಲ್ಲಾಧಿಕಾರಿ (ಪ್ರಭಾರ) ಗಳ ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು.
ಪ್ರತೀ ವರ್ಷದಂತೆ ಈ ಸಾಲಿನಲ್ಲಿಯೂ ಸುವ್ಯವಸ್ಥಿತವಾಗಿ ಕಾರ್ಯಕ್ರಮ ಏರ್ಪಡಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಗಳನ್ನು ರಚಿಸಲಾಯಿತು. ಪ್ರತಿಯೊಂದು ಸಮಿತಿಗೂ ನಿಗದಿತ ಹೊಣೆ ವಹಿಸಲಾಯಿತು.
ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶ್ರೀನಿವಾಸ ರಾವ್, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Please enter your comment!
Please enter your name here