ಹಿರಿಯಡಕದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಹಿರಿಯಡಕದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಡುಪಿ: ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಪಟುವಾದ ಬಾಬು ಶೆಟ್ಟಿ ಉದ್ಘಾಟಿಸಿ, ವಿದ್ಯಾರ್ಥಿಗಳು ಉತ್ತಮ ಶಿಸ್ತು, ಶ್ರದ್ಧೆ, ಪ್ರಯತ್ನ ಮತ್ತು ಗುರು ಹಿರಿಯರಲ್ಲಿ ಗೌರವ ಭಾವನೆ ಹೊಂದಿದ್ದರೆ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕ್ರೀಡೆಯು ಎಲ್ಲರಿಗೂ ಒಲಿಯುವುದಿಲ್ಲ. ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸ ಹೊಂದಿ ಮುನ್ನೆಡದರೆ ಮಾತ್ರ ಅದರ ಫಲ ನಿರೀಕ್ಷಿಸಬಹುದು ಎಂದು ತಿಳಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

national-sports-day

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಸೋಜನ್ ಕೆ. ಜಿ. ಹಲವು ದೃಷ್ಟಾಂತಗಳ ಮೂಲಕ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ, ಧನಾತ್ಮಕ ನಡವಳಿಕೆ ಹಾಗೂ ಕಾರ್ಯಪ್ರವರ್ತತೆಯ ಬಗ್ಗೆ ವಿವರಿಸಿದರು.

ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀಮತಿ ಸವಿತಾ ಪ್ರಾಸ್ತವಿಕ ಮಾತುಗಳನ್ನಾಡಿ ಬಂದ ಅತಿಥಿಗಳನ್ನು ಸ್ವಾಗತಿಸಿದರು. ರಮ್ಯ ನಿರೂಪಿಸಿದರೆ ಸಂದಿಪ್ ಶೆಟ್ಟಿ ವಂದನಾರ್ಪಣೆಗೈದರು. ವೇದಿಕೆಯಲ್ಲಿ ಕ್ರೀಡಾ ಕಾರ್ಯದರ್ಶಿಗಳಾದ ರಕ್ಷಿತಾಕುಮಾರಿ ಹಾಗೂ ಸಂದಿಪ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Please enter your comment!
Please enter your name here