ಅ. 16 ಪರಿವರ್ತನಾ ಸಮಾವೇಶದಲ್ಲಿ 400 ಕ್ಕೂ ಅಧಿಕ ಜೆಪಿ ಹೆಗ್ಡೆ ಬೆಂಬಲಿಗರು ಬಿಜೆಪಿ ಸೇರ್ಪಡೆ

Spread the love

ಅ. 16 ಪರಿವರ್ತನಾ ಸಮಾವೇಶದಲ್ಲಿ 400 ಕ್ಕೂ ಅಧಿಕ ಜೆಪಿ ಹೆಗ್ಡೆ ಬೆಂಬಲಿಗರು ಬಿಜೆಪಿ ಸೇರ್ಪಡೆ

ಉಡುಪಿ: ಅಕ್ಟೋಬರ್ 16 ರಂದು ಬ್ರಹ್ಮಾವರದಲ್ಲಿ ಜರಗುವ ಪರಿವರ್ತನಾ ಸಮಾವೇಶದಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆಯವರ ಸುಮಾರು 400-500 ಮಂದಿ ಬೆಂಬಲಿಗರು ಭಾರತೀಯ ಜನತಾ ಪಕ್ಷವನ್ನು ಸೇರಲಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದರು.

ಅವರು ಶುಕ್ರವಾರ ಪಕ್ಷದ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆಯವರು ಬಿಜೆಪಿಗೆ ಸೇರ್ಪಡೆಯಾದ ಬಳಿಕ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸ್ವಾಗತಿಸುವ ಸಲುವಾಗಿ ಪರಿವರ್ತನಾ ಸಮಾವೇಶವನ್ನು ಆಯೋಜಿಸಲಾಗಿತ್ತು ಆದರೆ ಪಕ್ಷದ ನಾಯಕರ ಬಿಡುವಿಲ್ಲದ ಕಾರ್ಯಕ್ರಮದ ಒತ್ತಡಗಳಿಂದಾಗಿ ಅದನ್ನು ನಡೆಸಲು ಸಾಧ್ಯವಾಗಿರಲಿಲ್ಲ. ಅಕ್ಟೋಬರ್ 16 ರಂದು ಸೋಮವಾರ ಬ್ರಹ್ಮಾವರದ ವ್ಯಾಲೆಂಟಿನ್ ಕಂಪೌಂಡ್ ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಸುಮಾರು 400-500 ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಯಾಗುವ ನೀರಿಕ್ಷೆ ಇದೆ ಎಂದರು. ಕಾರ್ಯಕ್ರಮವನ್ನು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ರಾಸಾಯನಿಕ ರಸಗೊಬ್ಬರ ಸಚಿವರಾದ ಅನಂತ ಕುಮಾರ್ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವಿ ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಲಕ್ಷ್ಮೀನಾರಾಯಣ, ಬಿಜೆಪಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ್ ಕುಮಾರ್ ಶೆಟ್ಟಿ ಹಾಗೂ ಇತರ ನಾಯಕರು ಭಾಗವಹಿಸಲಿದ್ದಾರೆ ಎಂದರು.


Spread the love