ಇ-ವೀಸಾ ಸೌಲಭ್ಯದಿಂದ ಕರಾವಳಿಯ ಪ್ರವಾಸೋದ್ಯಮಕ್ಕೆ ಹೊಸ ಆಯಾಮ – ನಳಿನ್‍ಕುಮಾರ್

Spread the love

ಇ-ವೀಸಾ ಸೌಲಭ್ಯದಿಂದ ಕರಾವಳಿಯ ಪ್ರವಾಸೋದ್ಯಮಕ್ಕೆ ಹೊಸ ಆಯಾಮ – ನಳಿನ್‍ಕುಮಾರ್

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏ.1ರಿಂದ `ಇ-ವೀಸಾ’ ಸೌಲಭ್ಯ ದೊರೆಯಲಿದ್ದು ಕರಾವಳಿಯ ಪ್ರವಾಸೋದ್ಯಮ ಹಾಗೂ ವೈದ್ಯಕೀಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಆಯಾಮ ದೊರೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರು ಬಳಿಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇ-ವೀಸಾ ಸೌಲಭ್ಯಕ್ಕೆ ಅನುಮತಿ ಕಲ್ಪಿಸಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಜಿಲ್ಲೆಯ ಜನತೆ ಅಭಿನಂದನೆ ಸಲ್ಲಿಸುವುದಾಗಿ ಸಂಸದ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಇ-ವೀಸಾ ಪರಿಶೀಲನಾ ಸೌಲಭ್ಯ ಇಲ್ಲದ ಕಾರಣ ವಿದೇಶದಿಂದ ಇ ವೀಸಾ ಮೂಲಕ ನೇರ ಮಂಗಳೂರಿಗೆ ಬರುವ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿತ್ತು. ಈ ನಿಟ್ಟಿನಲ್ಲಿ ಮಂಗಳೂರು ನಿಲ್ದಾಣಕ್ಕೆ ಇ-ವೀಸಾ ಸೌಲಭ್ಯ ಕಲ್ಪಿಸುವಂತೆ ಸಂಬಂಧಪಟ್ಟ ಸಚಿವಾಲಯಗಳಿಗೆ ಮನವಿ ಸಲ್ಲಿಸಲಾಗಿತ್ತು. ಇದೀಗ ಇ-ವೀಸಾ ಸೌಲಭ್ಯ ಅನುಷ್ಠಾನವಾಗುವ ಮೂಲಕ ಹೊರದೇಶದ ಪ್ರವಾಸಿಗರು, ಉದ್ಯಮಿಗಳು ಹಾಗೂ ವೈದ್ಯಕೀಯ ಚಿಕಿತ್ಸೆಗೆ ಬರುವವರು ನೇರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯಬಹುದಾಗಿದೆ. ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿರುವ ಮಂಗಳೂರು ನಗರದ ಬೆಳವಣಿಗೆಗೆ ಇದು ಅವಕಾಶ ತೆರೆದಿಡಲಿದೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love