ಉಜಿರೆ: ರುಡ್‍ಸೆಟ್‍ನಲ್ಲಿ ನಡೆಯುವ ಉಚಿತ ತರಬೇತಿಗಳು

Spread the love

ಉಜಿರೆ: ನಿರುದ್ಯೋಗಿ ಯುವಕ ಯುವತಿಯರಿಗೆ, ಉದ್ಯೋಗವನ್ನು ಅರಸುತ್ತಿರುವವರಿಗೆ ಹಾಗೂ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಆಶಾ ಕಿರಣವಾಗಿರುವ ಮತ್ತು ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕಾಗಿ ಅನುಕರಣೀಯ ಮಾದರಿ ಎಂದು ಗುರಿತಿಸಲ್ಪಟ್ಟು ದೇಶದ ಪ್ರತಿ ಜಿಲ್ಲೆಯಲ್ಲೂ ಬೇರೆ ಬೇರೆ ಬ್ಯಾಂಕುಗಳಿಂದ ರುಡ್‍ಸೆಟ್ ಮಾದರಿ ಸಂಸ್ಥೆಗಳನ್ನು ಸ್ಥಾಪಿಸಿ ಇಂದು ಅನೇಕ ಯುವ ಜನರಿಗೆ ಸ್ವ ಉದ್ಯೋಗ/ಉದ್ಯೋಗಳನ್ನು ಕಲ್ಪಿಸಿರುವ ಉಜಿರೆಯ ರುಡ್‍ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ತರಬೇತಿಗಳ ವಿವರಗಳು:

 ಸಿಸಿ ಕ್ಯಾಮರ ಅಳವಡಿಕೆ ಸ್ಮಾರ್ಟ್ ಪೋನ್ ರಿಪೇರಿ: 18.01.2016 ರಿಂದ 01-02-2016 (15 ದಿನಗಳು), ಸಾವಯವ ಕೃಷಿ : 25.01.2016 ರಿಂದ 30-01-2016 (06 ದಿನಗಳು),  ಕಂಪ್ಯೂಟರ್ ಡಿ.ಟಿ.ಪಿ. : 01.02.2016 ರಿಂದ 16-03-2016 (45 ದಿನಗಳು), ವಸ್ತ್ರ ವಿನ್ಯಾಸ (ಮಹಿಳೆಯರಿಗೆ) : 05.02.2016 ರಿಂದ 25-02-2016 (21 ದಿನಗಳು), ಆಹಾರ ಉತ್ಪನ್ನಗಳ ತಯಾರಿಕೆ ಮತ್ತು ಸಂಸ್ಕರಣೆ : 02.03.2016 ರಿಂದ 16-03-2016 (15 ದಿನಗಳು), ಕೃತಕ ಆಭರಣ ತಯಾರಿಕೆ : 04.03.2016 ರಿಂದ 18-03-2016 (15 ದಿನಗಳು), ಬಟ್ಟೆಯ ಬ್ಯಾಗ್ ತಯಾರಿಕೆ : 07.03.2016 ರಿಂದ 21-03-2016 (15 ದಿನಗಳು).

ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ತರಬೇತಿಯಲ್ಲಿ ಕೌಶಲ್ಯದ ಜೊತೆಗೆ ವ್ಯಾಪಾರ ವಹಿವಾಟು, ಸೇವಾ ಕ್ಷೇತ್ರ, ಕೈಗಾರಿಕೆ ಹಾಗೂ ಇನ್ನಿತರ ಘಟಕಗಳ ಸ್ಥಾಪನೆ ಮತ್ತು ನಿರ್ವಹಣೆ, ಸರಕಾರದ ಸಬ್ಸಿಡಿ ಯೋಜನೆಗಳು, ಬ್ಯಾಂಕ್ ಸಾಲ ಪಡೆಯುವ ವಿಧಾನ ಹಾಗೂ ಇನ್ನಿತರ ಮಹತ್ವದ ಉದ್ಯಮಶೀಲತಾ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಲಾಗುವುದು. ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ತರಬೇತಿಗಳಿಗೆ ಬರಲು 18 ರಿಂದ 45 ವರ್ಷಗಳ ವಯೋಮಿತಿಯ ಕನ್ನಡ ಓದು ಬರಹ ಬಲ್ಲ ಯುವಕ/ಯುವತಿಯರು ಅರ್ಜಿಯನ್ನು ಬಿಳಿ ಹಾಳೆಯಲ್ಲಿ ಅಥವಾ ಸಂಸ್ಥೆಯ ವೆಬ್‍ಸೈಟ್‍ನಿಂದ ಅರ್ಜಿನಮೂನೆಯನ್ನು ಪಡೆದು ಭರ್ತಿ ಮಾಡಿ : ನಿರ್ದೇಶಕರು, ರುಡ್‍ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ – 574 240, ಬೆಳ್ತಂಗಡಿ ತಾಲೂಕು, ದ.ಕ. ಇವರಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08256-236404ಗೆ ಸಂಪರ್ಕಿಸಬಹುದು.


Spread the love