ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

Spread the love

ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆಯನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರು ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಬಲೂನುಗಳನ್ನು ಹಾರಿ ಬಿಡುವ ಮೂಲಕ ಉದ್ಘಾಟಿಸಿದರು.

dasara-sports-meet-district-udupi

ನಂತರ ಮಾತನಾಡಿದ ಸಚಿವರು, ಈ ಬಾರಿಯ ರಾಜ್ಯದ ಕ್ರೀಡಾರತ್ನ ಮತ್ತು ಏಕಲವ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹೊರಗೆ ಅಂದರೆ ಮೈಸೂರಿನಲ್ಲಿ ನಡೆಸಲಾಗುವುದು, ಇದೇ ಸಂದರ್ಭದಲ್ಲಿ ಮೈಸೂರಿನಲ್ಲಿ ಈಜುಕೊಳವನ್ನೂ ಸಹ ಉದ್ಗಾಟಿಸಲಾಗುವುದು ಎಂದು ಹೇಳಿದರು.

dasara-sports-meet-district-udupi-00

ಮೈಸೂರಿನಲ್ಲಿ ನಡೆಯುವ ಈ ಬಾರಿಯ ದಸರಾ ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಮತ್ತು ಗರಿಷ್ಠ ತಂಡಗಳು ಭಾಗವಹಿಸುವಂತಾಗಲಿ , ಜಿಲ್ಲೆಯ ಕ್ರೀಡಾಪಟುಗಳು ಉತ್ತಮ ಸಾಧನೆಯನ್ನು ತೋರಲಿ ಎಂದು ಸಚಿವರು ಹಾರೈಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ , ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಾಯ್ಕರ್ ಉಪಸ್ಥಿತರಿದ್ದರು.


Spread the love