ಕಾಪುವಿನಲ್ಲಿ ಶಾಸಕ ಸೊರಕೆ ನೇತೃತ್ವ ‘ಮನೆ-ಮನೆಗೆ ಕಾಂಗ್ರೆಸ್’ ಕಾರ್ಯಕ್ರಮಕ್ಕೆ ಚಾಲನೆ

Spread the love

ಕಾಪುವಿನಲ್ಲಿ ಶಾಸಕ ಸೊರಕೆ ನೇತೃತ್ವ ‘ಮನೆ-ಮನೆಗೆ ಕಾಂಗ್ರೆಸ್’  ಕಾರ್ಯಕ್ರಮಕ್ಕೆ ಚಾಲನೆ

ಕಾಪು: 2018ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕರ್ನಾಟಕ ಕಾಂಗ್ರೆಸ್, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ. ಇದಕ್ಕಾಗಿ ‘ಮನೆ-ಮನೆಗೆ ಕಾಂಗ್ರೆಸ್’  ಕಾರ್ಯಕ್ರಮವನ್ನು ಶನಿವಾರದಿಂದ ಆರಂಭಿಸಿದೆ.

ರಾಜ್ಯ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೂ ತಲುಪಬೇಕೆಂಬ ಪರಿಕಲ್ಪನೆಯಡಿ ಕಾಂಗ್ರೆಸ್ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಅದರಂತೆ ಶನಿವಾರ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ.

ಕಾಪು ಕ್ಷೇತ್ರದ ಶಾಸಕ ವಿನಯ ಕುಮಾರ್ ಸೊರಕೆ ಅವರ ಕ್ಷೇತ್ರದಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.

ಕ್ಷೇತ್ರದಲ್ಲಿ ಸಂಚರಿಸಿದ ಕಾಂಗ್ರೆಸ್ ನಾಯಕರು ಅಲ್ಲಿಯ ಮನೆ-ಮನೆಗಳಿಗೆ ತೆರಳಿ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಸಿದರು .

ಕಾಪು ವಿಧಾಸಭಾ ಕ್ಷೇತ್ರದ ಶಾಸಕ ವಿನಯ್ ಕುಮಾರ್ ಸೊರಕೆಯವರೊಂದಿಗೆ, ಕಾಪು ವಿಧಾನಸಭಾ ಕ್ಷೇತ್ರ ಉಸ್ತುವಾರಿ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಬಸವರಾಜ್, ಬ್ಲಾಕ್ ಅಧ್ಯಕ್ಷ ನವೀನ್ಚಂದ್ರ ಶೆಟ್ಟಿ, ಸೌಮ್ಯ ಅಧ್ಯಕ್ಷರು ಕಾಪು ಪುರಸಭೆ, ಉಸ್ಮಾನ್ ಉಪಾಧ್ಯಕ್ಷರು ಕಾಪು ಪುರಸಭೆ, ದಿವಾಕರ ಶೆಟ್ಟಿ ಕಾಪು, ಅಶೋಕ್ ಕೊಡವೂರು, ಅಬ್ದುಲ್ಲ ಕಾಪು, ದೀಪಕ್ ಎರ್ಮಾಳ್, ಸರಸು ಬಂಗೇರ, ವಿಶ್ವಾಸ್ ವಿ ಅಮೀನ್, ಅಝೀಝ್ ಕಾಪು, ಮೆಲ್ವಿನ್ ಡಿಸೋಜ, ಗಣೇಶ್ ಕೋಟ್ಯಾನ್, ಹಾಗೂ ಕಾಪು ಪುರಸಭೆಯ ಸದಸ್ಯರು ಉಪಸ್ಥಿತರಿದ್ದರು.


Spread the love