ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Spread the love

ಧರ್ಮಸ್ಥಳ:  ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಇದೇ ಎಪ್ರಿಲ್ 29 ರಂದು (ಶುಕ್ರವಾರ) ಸಂಜೆ ಗಂಟೆ 6.50 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ.

ವರದಕ್ಷಿಣೆ ಹಾಗೂ ವಿವಾಹಕ್ಕಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಉಚಿತ ಸಾಮೂಹಿಕ ವಿವಾಹ ಯೋಜನೆ ಆರಂಭಿಸಿದ್ದು, ಪ್ರತಿವರ್ಷ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ ಏರ್ಪಡಿಸಲಾಗುತ್ತದೆ. ಕಳೆದ ವರ್ಷದ ವರೆಗೆ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹದಲ್ಲಿ 11,800 ಜೊತೆ ವಿವಾಹವಾಗಿದ್ದು, ಸುಖ-ಶಾಂತಿಯ ದಾಂಪತ್ಯ ಜೀವನ ನಡೆಸುತ್ತಿದ್ದಾರೆ.

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ಕೊಡಲಾಗುವುದು. ಸಾಮೂಹಿಕ ವಿವಾಹದಲ್ಲಿ ವಿವಾಹವಾಗಲು ಇಚ್ಛಿಸುವವರು ಎಪ್ರಿಲ್ 25 (ಸೋಮವಾರ) ರ ಒಳಗೆ ಧರ್ಮಸ್ಥಳದಲ್ಲಿ ವಸಂತ ಮಹಲ್ (ಮಂಜಯ್ಯ ಹೆಗ್ಗಡೆ ಕಲಾಭವನ)ದ ಬಳಿ ಇರುವ ವಿವಾಹ ನೋಂದಣಿ ಕಚೇರಿಯಲ್ಲಿ ಹೆಸರು ದಾಖಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 08256-277144.


Spread the love