ಪತ್ನಿಯ ಕೊಲೆಗೆ ಯತ್ನಿಸಿ ಆತ್ಮಹತ್ಯೆಗೆ ಶರಣಾದ ಪತಿ

Spread the love

ಪತ್ನಿಯ ಕೊಲೆಗೆ ಯತ್ನಿಸಿ ಆತ್ಮಹತ್ಯೆಗೆ ಶರಣಾದ ಪತಿ

ಬೆಳ್ತಂಗಡಿ: ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿ ಸಮೀಪದ ಕೊಲ್ಪೆದ ಬೈಲುವಿನಲ್ಲಿ ಗುರುವಾರ ಸಂಭವಿಸಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೇರಳ ಮೂಲದ ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಶಾಜಿ (45) ಎಂದು ಗುರುತಿಸಲಾಗಿದೆ.

ಶಾಜಿ ಮತ್ತು ಆತನ ಪತ್ನಿ ಕೊಲ್ಪೆದಬೈಲಿನಲ್ಲಿ ಬಾಡಿಗೆ ಮನೆಯಲ್ಲಿ ಕಳೆದ ಕೆಲವು ಸಮಯದಿಂದ ವಾಸಿಸುತ್ತಿದ್ದು ಪತ್ನಿ ಬ್ಯೂಟಿ ಪಾರ್ಲರ್ ಒಂದರಲ್ಲಿ ಕೆಲಸಾ ಮಾಡುತ್ತಿದ್ದರು. ಗಂಡ ಹೆಂಡತಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

ಬುಧವಾರ ಸಂಜೆಯ ವೇಳೆ ಪತಿ ಪತ್ನಿಯರ ನಡುವೆ ಗಲಾಟೆ ನಡೆದಿದ್ದು, ಶಾಜಿ ಮಾರಕಾಸ್ತ್ರಗಳಿಂದ ಪತ್ನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಆಕೆಯ ತಲೆ ಕೈ ಹಾಗೂ ದೇಹದ ಮೇಲೆಲ್ಲ ಗಂಭೀರ ಗಾಯಗೊಳಾಗಿದ್ದು ಬಳಿಕ ಆತ ಮನೆಯಿಂದ ಹೊರ ಹೊಗಿದ್ದಾನೆ. ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು, ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ ಶಾಜಿ ಮನೆಯ ಸಮೀಪವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಗಮನಿಸಿದ ಸ್ಥಳೀಯರು ಪೋಲಿಸರು ಮಾಹಿತಿ ನೀಡಿದ್ದಾರೆ.

ಪುಂಜಾಲಕಟ್ಟೆ ಪೋಲಿಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love