ಬಜೆಟ್ ನಲ್ಲಿ ಏಳನೆ ವೇತನ ಆಯೋಗದ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Spread the love

ಬಜೆಟ್ ನಲ್ಲಿ ಏಳನೆ ವೇತನ ಆಯೋಗದ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಶಿವಮೊಗ್ಗ: ಮುಂದಿನ ಬಜೆಟ್ ನಲ್ಲಿ ಏಳನೆ ವೇತನ ಆಯೋಗದ ಘೋಷಣೆ ಮಾಡಲಾಗುವುದು ಹಾಗೂ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ವಿರುದ್ದ ನಿರ್ದಾಕ್ಷ್ಯೀಣ್ಯ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಉದ್ಘಾಟನೆ ಮತ್ತು ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟ ಉದ್ಘಾಟನೆಗೆ ಮುಖ್ಯಮಂತ್ರಿಗಳು ಆಗಮಿಸಿದ ಸಂಧರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ಲೋಕಾಯುಕ್ತ ನೇಮಕಕ್ಕೆ ಹಿನ್ನಡೆಯಾಗಿಲ್ಲ,ಈ ಕುರಿತು ಮರುಪರಿಶೀಲಿಸಿ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.

ಶಿವಮೊಗ್ಗ ನಗರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಇಲಾಖೆ ಸಂಯುಕ್ತವಾಗಿ ನಿರ್ಮಿಸಿರುವ ಕ್ರೀಡಾ ಸಂಕೀರ್ಣವನ್ನು , ಶಿವಮೊಗ್ಗ ಮಹಾ ನಗರ ಪಾಲಿಕೆ ಆವರಣದಲ್ಲಿ ಡಾ ಅಂಬೇಡ್ಕರ್ ಅವರ ನೂತನ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಸಚಿವರುಗಳಾದ ಕಾಗೋಡು ತಿಮ್ಮಪ್ಪ, ಪ್ರಮೋದ್ ಮದ್ವರಾಜ್ ಮತ್ತು ಗಣ್ಯರು ಮುಖ್ಯಮಂತ್ರಿಗಳ ಜೊತೆ ಹಾಜರಿದ್ದರು.


Spread the love