ಮಂಗಳೂರು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಿಗೆ ವಿದ್ಯಾರ್ಥಿಯಿಂದ ಹಲ್ಲೆ

Spread the love

ಮಂಗಳೂರು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಿಗೆ ವಿದ್ಯಾರ್ಥಿಯಿಂದ ಹಲ್ಲೆ

ಮಂಗಳೂರು: ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಿಗೆ ತೃತೀಯ ವರ್ಷದ ಕಾಲೇಜು ವಿದ್ಯಾರ್ಥಿಯೋರ್ವ ಹಲ್ಲೆ ನಡೆಸಿದ ಘಟನೆ ನಗರದಲ್ಲಿ ಗುರುವಾರ ನಡೆದಿದೆ.

ಪೋಲಿಸ್ ಮೂಲಗಳ ಪ್ರಕಾರ ಮಹಮ್ಮದ್ ಶಾನವಾಜ್ ಎನ್ನುವ ವಿದ್ಯಾರ್ಥಿ ಗುರುವಾರ ಪ್ರಾಂಶುಪಾಲರ ಕೊಠಡಿಗೆ ನುಗ್ಗಿ ಪ್ರಾಂಶುಪಾಲ ಫಾ ಮೈಕಲ್ ಸಾಂತುಮಾಯೆರ್ ಅವರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಮೊಹಮ್ಮದ್ ಕಾಲೇಜು ಹಾಜರಾತಿ ಕಡಿಮೆ ಇದ್ದು ಈ ಬಗ್ಗೆ ಪ್ರಾಂಶುಪಾಲರು ಆತನಿಗೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ಪ್ರಸ್ತುತ ಪ್ರಾಂಶುಪಾಲರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿದ್ದು ಆರೋಪಿ ಮಹಮ್ಮದ್ ನಾಪತ್ತೆಯಾಗಿದ್ದಾನೆ.

ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love