ಮರಳು ಪೂರೈಕೆ ಸುಗಮಗೊಳಿಸಲು ಸಚಿವರ ಸೂಚನೆ

Spread the love

ಮರಳು ಪೂರೈಕೆ ಸುಗಮಗೊಳಿಸಲು ಸಚಿವರ ಸೂಚನೆ
ಮ0ಗಳೂರು : ಜಿಲ್ಲೆಯಲ್ಲಿ ಮರಳು ಪೂರೈಕೆ ಕೊರತೆಯಾಗದಂತೆ ಸಾರ್ವಜನಿಕರಿಗೆ ಮರಳು ಸುಗಮವಾಗಿ ಲಭ್ಯವಾಗಲು ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳುವಂತೆ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡುತ್ತಿದ್ದರು. ಅಕ್ರಮವಾಗಿ ಮರಳು ಎತ್ತುವುದರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈಲ್ಲೆಯಲ್ಲಿ ಉತ್ತಮ ಗುಣಮಟ್ಟದ ಮರಳು ಲಭ್ಯವಿರುವುದರಿಂದ ನಿಯಮಾನುಸಾರ ಸಾರ್ವಜನಿಕರಿಗೆ ಮರಳು ಲಭ್ಯವಾಗುವಂತೆ ಗಮನಹರಿಸಲು ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಮಾತನಾಡಿ, ಕರಾವಳಿ ನಿಯಂತ್ರಣ ವಲಯದಲ್ಲಿ(ಸಿಆರ್‍ಝಡ್) ಈಗಾಗಲೇ ಮರಳು ಎತ್ತಲು 41 ಪರ್ಮಿಟ್ ನೀಡಲಾಗಿದೆ. ಮೂರು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವರ್ಷ ಮರಳುಗಾರಿಕೆಯಲ್ಲಿ ತೊಡಗಿದ್ದ ಸಾಂಪ್ರದಾಯಿಕ ಮರಳುಗಾರಿಕೆಯಲ್ಲಿ ತೊಡಗಿದ್ದವರಿಗೆ ದಾಖಲೆಗಳನ್ನು ಪರಿಶೀಲಿಸಿ ಪರವಾನಿಗೆ ನೀಡಲಾಗುತ್ತದೆ. ಆದರೆ, ಮರಳನ್ನು ಸ್ಥಳೀಯವಾಗಿ ಮಾರಾಟ ಮಾಡಬೇಕಾಗಿದೆ ಎಂದು ಹೇಳಿದರು.

ನಾನ್ ಸಿಆರ್‍ಝಡ್ ಪ್ರದೇಶಗಳಲ್ಲಿ ಮರಳು ಬ್ಲಾಕ್‍ಗಳನ್ನು ಗುರುತಿಸಲು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದ್ದು, ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.


Spread the love