ರೈಲ್ವೇ ಫ್ಲಾಟ್ ಫಾರಂ ನಲ್ಲಿ ಟಿಕ್ ಟಾಕ್ ಶೋ: ಇಬ್ಬರ ಬಂಧನ

Spread the love

ರೈಲ್ವೇ ಫ್ಲಾಟ್ ಫಾರಂ ನಲ್ಲಿ ಟಿಕ್ ಟಾಕ್ ಶೋ: ಇಬ್ಬರ ಬಂಧನ

ಉಡುಪಿ: ಉಡುಪಿ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂನಲ್ಲಿ ರೈಲು ಬರುವ ಸಂದರ್ಭದಲ್ಲಿ ಫ್ಲಾಟ್ ಫಾರಂ ಮೇಲೆ ನೃತ್ಯ ಮಾಡುತ್ತಾ ಟಿಕ್ ಟಾಕ್ ವೀಡಿಯೋ ಮಾಡುತ್ತಿದ್ದ ಇಬ್ಬರನ್ನು ಎಫ್ರಿಲ್ 14 ರಂದು ರೈಲ್ವೆ ಪೊಲೀಸರು ಬಂದಿಸಿದ್ದಾರೆ.

ಬಂಧಿತರನ್ನು ಸೋಮವಾರ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು, ಆರೋಪಿಗಳಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿ ತೀರ್ಪು ನೀಡಲಾಯಿತು.

ರೈಲು ಚಲಿಸುವ ಸಂದರ್ಭದಲ್ಲಿ ಅಥವಾ ರೈಲ್ವೆ ಟ್ರ್ಯಾಕ್ ಮೇಲೆ ವೀಡಿಯೋ ಮಾಡುವುದು ಅಪಾಯಕಾರಿಯಾಗಿದ್ದು, ಹಲವಾರು ಮಂದಿ ರೈಲಿಗೆ ಡಿಕ್ಕಿ ಹೊಡೆಯುವ ಮೂಲಕ ಅಥವಾ ರೈಲಿನಿಂದ ಬೀಳುವ ಮೂಲಕ ಸಾವನ್ನಪ್ಪಿದ್ದಾರೆ. ಆದ್ದರಿಂದ ಸಾರ್ವಜನಿಕರು ಈ ರೀತಿಯ ಚಟುವಟಿಕೆಗಳು ತಮಗೆ ಹಾನಿ ಮಾಡುವುದರ ಜೊತೆಗೆ ಇತರ ಪ್ರಯಾಣಿಕರಿಗೂ ಅನಾನುಕೂಲತೆಯನ್ನು ಉಂಟು ಮಾಡುತ್ತದೆ. ಈ ರೀತಿಯ ಅಪರಾಧಗಳು ರೈಲ್ವೆ ಕಾಯ್ದೆ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಪ್ರಕಟಣೆ ತಿಳಿಸಿದೆ.


Spread the love