ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು – ಸಸಿಕಾಂತ್ ಸೆಂಥಿಲ್

Spread the love

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು: ಸಸಿಕಾಂತ್ ಸೆಂಥಿಲ್

ಮಂಗಳೂರು: ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲಾ ಸಿದ್ದತೆಮಾಡಿಕೊಳ್ಳಲಾಗಿದೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಮತದಾನ ಪ್ರಕ್ರಿಯೆಗೆ 8,920 ಸಿಬ್ಬಂದಿ ಜಿಲ್ಲೆಯ 1861 ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸಲು 8,920 ಸಿಬ್ಬಂದಿ ಸಿದ್ಧರಾಗಿದ್ದಾರೆ. ಸಿಬ್ಬಂದಿಯನ್ನು ವಿಧಾನ ಸಭಾ ಕ್ಷೇತ್ರಗಳಿಗೆ ತಲುಪಿಸಲು ಒಟ್ಟು 79 ವಾಹನಗಳು ಹಾಗೂ ವಿಧಾನ ಸಭಾ ಕ್ಷೇತ್ರಗಳಿಂದಸಂಬಂಧಪಟ್ಟ ಮತಗಟ್ಟೆಗಳಿಗೆ ತಲುಪಿಸಲು 668 ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಇದುವರೆಗೆ 15 ವಾಹನಗಳು (1.08 ಕೋಟಿ ರೂ. ವೌಲ್ಯ) ಹಾಗೂ 31 ಲಕ್ಷ ರೂ. ನಗದನ್ನು ವಿವಿಧಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದರು.

ಮತದಾನಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಪೂರ್ವ ತಯಾರಿಗೆ ಸಂಬಂಧಿಸಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಅವಧಿಯಲ್ಲಿ 84,285.10 ಲೀಟರ್ ಮದ್ಯ (94.55 ಲಕ್ಷ ರೂ. ವೌಲ್ಯ) ವಶಪಡಿಸಿಕೊಳ್ಳಲಾಗಿದೆ ಎಂದರು.

ಅಬಕಾರಿ ಕಾನೂನು ಉಲ್ಲಂಘನೆಗೆ ಸಂಬಂಧಿಸಿ 587 ಪ್ರಕರಣಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸುವಿಧಾ ಮೂಲಕ 584 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 520 ಪ್ರಕರಣಗಳನ್ನುಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು.

ಇಂದು ಸಂಜೆ (ಎ.16) 6 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ. 6 ಗಂಟೆಯ ನಂತರ ಕ್ಷೇತ್ರದಿಂದ ಹೊರಗಿನ ಚುನಾವಣಾ ಪ್ರಚಾರಕರು ಜಿಲ್ಲೆಯಲ್ಲಿ ಇರುವಂತಿಲ್ಲ. ಈ ಬಗ್ಗೆ ಪರಿಶೀಲನೆನಡೆಸಲು ಮೇಲ್ವಿಚಾರಕರನ್ನು ಹೊಟೇಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ನಿಯೋಜಿಸಲಾಗಿದೆ. ಅವಧಿ ಮೀರಿ ಹೊರ ಕ್ಷೇತ್ರಗಳ ಪ್ರಚಾರಕರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.


Spread the love