ವಿಜಯಲಕ್ಷ್ಮೀ ಶಿಬರೂರುಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ

ವಿಜಯಲಕ್ಷ್ಮೀ ಶಿಬರೂರುಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ

ಕೋಟ: ಬ್ರಹ್ಮಾವರ ವಲಯ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ, ಪತ್ರಿಕೋದ್ಯಮದ ಅಗ್ರಗಣ್ಯ ಸಾಧಕ ದಿ. ವಡ್ಡರ್ಸೆ ರಘುರಾಮ ಶೆಟ್ಟಿಯವರ ಹೆಸರಿನಲ್ಲಿ ಈ ವರ್ಷದಿಂದ ಕೊಡಮಾಡುವ ಪ್ರತಿಷ್ಠಿತ `ವಡ್ಡರ್ಸೆ ರಘುರಾಮ ಶೆಟ್ಟಿ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿಗೆ’ ಖ್ಯಾತ ಪತ್ರಕರ್ತೆ, ಸುವರ್ಣ ನ್ಯೂಸ್‍ನ ಕವರ್ ಸ್ಟೋರಿ ಖ್ಯಾತಿಯ ವಿಜಯಲಕ್ಷ್ಮೀ ಶಿಬರೂರು ಆಯ್ಕೆಯಾಗಿದ್ದಾರೆ ಎಂದು ಬ್ರಹ್ಮಾವರ ವಲಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ತಿಳಿಸಿದ್ದಾರೆ.

vijaylaxmi-shibaroor

ಜು.24ರಂದು ಬೆಳಿಗ್ಗೆ 9.30ರಿಂದ ಬ್ರಹ್ಮಾವರ ಬಂಟರ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ಸಂಪನ್ಮೂಲ ವ್ಯಕ್ತಿಗಳ ಮೂಲಕ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪತ್ರಿಕೋದ್ಯಮ ಕಾರ್ಯಾಗಾರ ಹಾಗೂ ಸಂಜೆ 4ರಿಂದ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ನಾಡಿನ ಗಣ್ಯ ಚಿಂತಕರು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Leave a Reply