ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ – ದೂರು ದಾಖಲು

Spread the love

ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ – ದೂರು ದಾಖಲು

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಅವಹೇಳನಕಾರಿಯಾಗಿ ಬರೆಯುತ್ತಿದ್ದ ಪ್ರವೀಣ್  ಎಂಬ ಯುವಕನ ಮೇಲೆ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರವೀಣ್  ಉಡುಪಿ ಚಿಕ್ಕಮಗಳೂರು ಸಂಸದೆ ಬಗ್ಗೆ ಅಶ್ಲೀಲವಾಗಿ ಬರೆಯುತ್ತಿದ್ದು. ಫೇಸ್ ಬುಕ್, ವಾಟ್ಸಾಪ್ ಗಳಲ್ಲಿ ಅದನ್ನು ಶೇರ್ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ನಮೂದಿಸಲಾಗಿದೆ. ಈ ಬಗ್ಗೆ ಉಡುಪಿ ಎಸ್ ಪಿ ಗೂ ದೂರು ಸಲ್ಲಿಸಲಾಗಿದೆ. ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಲಾಗಿದ್ದು, 2019 ರಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ರೀತಿಯ ಅಪಪ್ರಚಾರ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಕಳೆದ ಕೆಲ ದಿನಗಳಿಂದ ಗೋ ಬ್ಯಾಕ್ ಶೋಭಾ ಹೆಸರಲ್ಲಿ ಅಭಿಯಾನವೂ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ. ಈ ಎಲ್ಲಾ ವಿಚಾರಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಗೆ ರವಾನಿಸಲಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.


Spread the love