ಸೆ.27 ರಂದು ಜನಮನ ಕಾರ್ಯಕ್ರಮ: ಉಸ್ತುವಾರಿ ಸಚಿವರಿಂದ ಸಂವಾದ

Spread the love

ಸೆ.27 ರಂದು ಜನಮನ ಕಾರ್ಯಕ್ರಮ: ಉಸ್ತುವಾರಿ ಸಚಿವರಿಂದ ಸಂವಾದ 

ಮ0ಗಳೂರು : ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸುವ ‘ಜನಮನ’ ಕಾರ್ಯಕ್ರಮವು ಸೆಪ್ಟಂಬರ್ 27 ರಮದು ಮಂಗಳೂರಿನಲ್ಲಿ ನಡೆಯಲಿದೆ.

ಈ ಕುರಿತು ಪೂರ್ವಭಾವಿ ಸಭೆ ಶುಕ್ರವಾರ ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ನಾಗರೀಕರ ಪ್ರಗತಿಗೆ ಸರಕಾರವು ಅನೇಕ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಸರಕಾರದ ಪ್ರಮುಖ ಯೋಜನೆಗಳ ಫಲಾನುಭವಿಗಳು ಜನಮನ ಕಾರ್ಯಕ್ರಮದಲ್ಲಿ ಭಾಗವಹಿಸುವಂತಾಗಬೇಕು. ಈ ಕುರಿತು ಎಲ್ಲಾ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

janamana

ರಾಜ್ಯ ಸರಕಾರದ ಅನ್ನಭಾಗ್ಯ, ವಿದ್ಯಾಸಿರಿ, ಕ್ಷೀರಭಾಗ್ಯ, ಮನಸ್ವಿನಿ, ಮೈತ್ರಿ, ವಸತಿ, ಕ್ಷೀರಧಾರೆ ಸೇರಿದಂತೆ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜನಮನ ಕಾರ್ಯಕ್ರಮದಲ್ಲಿ ಸೇರಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಯೊಂದು ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿ ಅವುಗಳ ಸಾಧಕ-ಭಾದಕಗಳ ಬಗ್ಗೆ ಅರಿಯಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸರಕಾರದ ವಿವಿಧ ಯೋಜನೆಗಳ ಮಾಹಿತಿ, ಅವುಗಳ ಪರಿಚಯ ವಿವರಿಸಲು ಕಿರುಪುಸ್ತಕವನ್ನು ಹೊರತರುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ವಾರ್ತಾಧಿಕಾರಿ ಬಿ.ಎ.ಖಾದರ್ ಶಾ ಮಾತನಾಡಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸೆಪ್ಟಂಬರ್ 27 ರಂದು ಮಂಗಳೂರು ಪುರಭವನದಲ್ಲಿ ಜನಮನ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಸರಕಾರದ ವಿವಿಧ ಯೋಜನೆಗಳ ಸುಮಾರು 1000 ಫಲಾನುಭವಿಗಳು ಭಾಗವಹಿಸಲಿದ್ದಾರೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ
ಎನ್.ಆರ್.ಉಮೇಶ್, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.


Spread the love