ರಾಜ್ಯ ಸರಕಾರಿ ನೌಕರರಿಗೂ ಕೇಂದ್ರ ವೇತನ- ಸಿಎಂ ಭರವಸೆ

ರಾಜ್ಯ ಸರಕಾರಿ ನೌಕರರಿಗೂ ಕೇಂದ್ರ ವೇತನ- ಸಿಎಂ ಭರವಸೆ

ಮ0ಗಳೂರು: ಜುಲೈ 16 ರಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರುಗಳು ಹಾಗೂ ಕೇಂದ್ರ ಸಂಘದ ಪದಾಧಿಕಾರಿಗಳ ನಿಯೋಗವು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಕೇಂದ್ರ ಸರಕಾರಿ ನೌಕರರಿಗೆ ಸಮಾನವಾಗಿ ವೇತನ ಭತ್ತೆಗಳನ್ನು ರಾಜ್ಯ ಸರಕಾರಿ ನೌಕರರಿಗೆ ನೀಡಬೇಕೆಂಬ ಮತ್ತು ಏಕೈಕ ಬೇಡಿಕೆಯನ್ನು ಈಡೇರಿಸಬೇಕೆಂದು ಮನವಿ ಸಲ್ಲಿಸಿದ್ದರು.

ನೌಕರರ ಬೇಡಿಕೆ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಬೇಡಿಕೆ ಕುರಿತು ಚರ್ಚಿಸಲು ಶೀಘ್ರವೇ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಹಣಕಾಸು ಇಲಾಖೆಯ ಅಧಿಕಾರಿಗಳ ಸಭೆಯನ್ನು ಕರೆಯಲಾಗುವುದು. ಆ ಬಳಿಕ ಮತ್ತೊಮ್ಮೆ ನೌಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದೆಂದು ತಿಳಿಸಿರುತ್ತಾರೆ ಎಂಬುದಾಗಿ ನಿಯೋಗದಲ್ಲಿ ಪಾಲ್ಗೊಂಡಿದ್ದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದ.ಕ ಜಿಲ್ಲಾಧ್ಯಕ್ಷ ಪ್ರಕಾಶ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply