5 ಹೆಕ್ಟೇರ್‍ವರೆಗೆ ಗಣಿಗಾರಿಕೆ: ಜಿಲ್ಲಾ ಮಟ್ಟದಲ್ಲೇ ಅನುಮತಿ

Spread the love

ಮಂಗಳೂರು: ಐದು ಹೆಕ್ಟೇರ್‍ವರೆಗೆ ಜಮೀನಿನಲ್ಲಿ ಗಣಿಗಾರಿಕೆ, ಮರಳುಗಾರಿಕೆಗೆ ಅನುಮತಿಯನ್ನು ಇನ್ನು ಮುಂದೆ ಜಿಲ್ಲಾ ಮಟ್ಟ್ಟದಲ್ಲಿ ರಚಿಸಲಾಗಿರುವ ಜಿಲ್ಲಾ ಪರಿಸರ ಪರಿಣಾಮಗಳ ವಿಶ್ಲೇಷಣಾ ಪ್ರಾಧಿಕಾರದಿಂದ ನೀಡಲಾಗುವುದು ಎಂದು ರಾಜ್ಯ ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಅವರು ತಿಳಿಸಿದ್ದಾರೆ.

ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಪರಿಸರ ಪರಿಣಾಮಗಳ ವಿಶ್ಲೇಷಣಾ ಪ್ರಾಧಿಕಾರದ ಅಧ್ಯಕ್ಷರಿಗೆ ಮತ್ತು ಸದಸ್ಯರಿಗೆ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ಸಂಬಂಧಪಟ್ಟ ಸಹಾಯಕ ಆಯುಕ್ತರು ಕಾರ್ಯದರ್ಶಿಗಳಾಗಿರುತ್ತಾರೆ. ಈ ಸಮಿತಿಯು ಬಂದ ಅರ್ಜಿಗಳನ್ನು ಅಧ್ಯಯನ ಮಾಡಿ, ಅನುಮತಿ ನೀಡುವ ಬಗ್ಗೆ ಕ್ರಮ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದರು.

image001dc-press-020160502-001

ಗಣಿಗಾರಿಕೆಗೆ ಬಂದ ಅರ್ಜಿಗಳ ಸಮರ್ಪಕ ವಿಶ್ಲೇಷಣೆ ಮಾಡುವುದು ಪ್ರಾಮುಖ್ಯವಾಗಿದೆ. ಅನುಮತಿ ನೀಡಿದ ಬಳಿಕ, ಪರವಾನಿಗೆದಾರರು ಯಾವುದೇ ಷರತ್ತಿನ ಉಲ್ಲಂಘನೆ ಮಾಡಿದರೆ ಅವರ ನಿರಾಕ್ಷೇಪಣಾ ಪತ್ರವನ್ನು ರದ್ದುಪಡಿಸಿ, ಅವರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸುವ ಅಧಿಕಾರವನ್ನು ಜಿಲ್ಲಾ ಸಮಿತಿ ಹೊಂದಿರುತ್ತದೆ ಎಂದು ರಾಮಚಂದ್ರ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ, ಅರಣ್ಯ ಇಲಾಖೆಯ ಅಧಿಕಾರಿ ವಿಜಯಕುಮಾರ್, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ರಾಜಶೇಖರ ಪುರಾಣಿಕ್ ಮತ್ತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love