ಅಂಗನವಾಡಿಗಳಿಗೆ ಕಂಪೌಂಡ್, ಕಾಲು ಸಂಕ ನಿರ್ಮಾಣಕ್ಕೆ ಸಂಸದ ಬಿ ವೈ ರಾಘವೇಂದ್ರ ಮನವಿ

Spread the love

ಅಂಗನವಾಡಿಗಳಿಗೆ ಕಂಪೌಂಡ್, ಕಾಲು ಸಂಕ ನಿರ್ಮಾಣಕ್ಕೆ ಸಂಸದ ಬಿ ವೈ ರಾಘವೇಂದ್ರ ಮನವಿ

ಕುಂದಾಪುರ: ಶನಿವಾರ ಬೆಂಗಳೂರಿಗೆ ಭೇಟಿ ನೀಡಿರುವ ಕೇಂದ್ರ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸ್ಥಾಯಿ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದ ಸಮಿತಿಯ ಸದಸ್ಯರು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದೂರವಾಣಿ ಸಂಪರ್ಕ, ಅಂಗನವಾಡಿ ಶಾಲೆಗಳಿಗೆ ಕಾಂಪೌಂಡ್ ನಿರ್ಮಿಸುವ ಬಗ್ಗೆ ಹಾಗೂ ಕಾಲುಸಂಕಗಳನ್ನು ನಿರ್ಮಾಣ ಮಾಡುವ ಬಗ್ಗೆ ವಿಷಯ ಮಂಡನೆ ಮಾಡಿ ಈ ವಿಷಯಗಳ ಬಗ್ಗೆ ಗಮನಹರಿಸಿ ಶೀಘ್ರವೇ ಸೂಕ್ತ ಪರಿಹಾರವನ್ನು ನೀಡುವ ಬಗ್ಗೆ ವಿನಂತಿಸಿದರು.

ಈ ಸಭೆಯಲ್ಲಿ ಭಾಗವಹಿಸಿದ್ದ ರಾಜ್ಯದ ವಿವಿಧ ಇಲಾಖೆಗಳ ಮುಖ್ಯಸ್ಥರು, ರಾಜ್ಯ ಲೀಡ್ ಬ್ಯಾಂಕ್‌ಗಳಾದ ಕೆನರಾ ಬ್ಯಾಂಕ್‌ ಹಾಗೂ ಯೂನಿಯನ್ ಬ್ಯಾಂಕ್ ಮುಖ್ಯಸ್ಥರೊಂದಿಗೆ ವಿವಿಧ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನದ ಬಗ್ಗೆಯೂಚರ್ಚಿಸಲಾಯಿತು. ರಾಜ್ಯದ ವಿವಿಧ ಕೈಗಾರಿಕೋಧ್ಯಮದವರೊಂದಿಗೆ ಸಿ.ಎಸ್.ಆರ್ ಅನುದಾನವನ್ನು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬಳಸುವ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಸಮಿತಿಯ ಅಧ್ಯಕ್ಷರಾದ ಪ್ರತಾಪ್ ರಾವ್ ಜಾಧವ್, ಸಮಿತಿಯ ಸದಸ್ಯರಾಗಿರುವ ಸಂಸತ್ ಸದಸ್ಯರು, ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತಿಕ್ ಹಾಗೂ ಇತರ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.


Spread the love