ಅಂತರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಿ

Spread the love

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಆಯುಷ್ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನ ಆಚರಿಸಲಾಗುತ್ತದೆ.
ಜಿಲ್ಲಾ ಒಳಾಂಗಣ ಕ್ರೀಡಾಂಗಣ , ಅಜ್ಜರಕಾಡು ಉಡುಪಿ ಇಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, 7 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಮೊದಲಿನ 45 ನಿಮಿಷಗಳ ಅವಧಿಗೆ ಆಯುಷ್ ಮಂತ್ರಾಲಯದಿಂದ ನೀಡಲ್ಪಟ್ಟ ಯೋಗಾಸನಗಳ ಪ್ರಾತ್ಯಕ್ಷಿಕೆ ಪ್ರದರ್ಶನ, ಯೋಗ ನಡಿಗೆ ಮುಂತಾದ ಯೋಗದ ಬಗ್ಗೆ ಜಾಗೃತಿಯನ್ನು ಉಂಟು ಮಾಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು , ವಿದ್ಯಾರ್ಥಿಗಳು, ಸಂಘಸಂಸ್ಥೆಯ ಪದಾಧಿಕಾರಿಗಳು ಸದಸ್ಯರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಜಿಲ್ಲಾ ಆಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Spread the love