ಅಂತರಾಷ್ಟ್ರೀಯ ಸಾಂಸ್ಕøತಿಕ ಜಾಂಬೂರಿ: ಮಲ್ಲಕಂಬ ತರಬೇತಿ ಶಿಬಿರಕ್ಕೆ ಚಾಲನೆ

Spread the love

ಅಂತರಾಷ್ಟ್ರೀಯ ಸಾಂಸ್ಕøತಿಕ ಜಾಂಬೂರಿ: ಮಲ್ಲಕಂಬ ತರಬೇತಿ ಶಿಬಿರಕ್ಕೆ ಚಾಲನೆ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಾಂಸ್ಕøತಿಕ ಜಾಂಬೂರಿ ಪ್ರಯುಕ್ತ ರಾಜ್ಯ ಮಟ್ಟದ ಮಲ್ಲಕಂಬ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಯಿತು

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, `ಮಲ್ಲಕಂಬ ಗ್ರಾಮೀಣ ಕ್ರೀಡೆಯಾಗಿದ್ದು ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಸಾಗಬೇಕು. ಆಳ್ವಾಸ್ ಸಂಸ್ಥೆ ಶಿಕ್ಷಣಕ್ಕೆ ಒತ್ತು ನೀಡುವ ಜತೆಗೆ ಗ್ರಾಮೀಣ ಕ್ರೀಡೆ, ಕಲೆ, ಸಂಸ್ಕೃತಿಗೂ ಕೂಡಾ ಹೆಚ್ಚಿನ ಮಹತ್ವ ಮತ್ತು ಬೃಹತ್À ವೇದಿಕೆಯನ್ನು ನೀಡಿ ಮಕ್ಕಳಲ್ಲಿನ ಕ್ರೀಡಾ ಕಲೆಯನ್ನು ಹೊರತೆಗೆಯುವಂತಹ ಕೆಲಸ ಮಾಡುತ್ತಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಈ ಐತಿಹಾಸಿಕ ಜಾಂಬೂರಿ ಕಾರ್ಯಕ್ರಮವನ್ನು ಇತಿಹಾಸದ ಪುಟಗಳಲ್ಲಿ ಸೇರಿಸೋಣ ಎಂದರು.

ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಪ್ರಾಚಾರ್ಯರಾದ ಡಾ. ಕುರಿಯನ್. ಹಿರಿಯ ಮಲ್ಲಕಂಬ ತರಬೇತುದಾರ ಸಿ. ಕೆ. ಚೆನ್ನಾಳ್, ಬಸವರಾಜ್ ಉಪಸ್ಥಿತರಿದ್ದರು. ಶ್ರೀನಿಧಿ ಎಳಚಿತ್ತಾಯ ನಿರೂಪಿಸಿ, ವಂದಿಸಿದರು.


Spread the love