ಅಂತರ್ ರಾಜ್ಯ ಮನೆ ಕಳ್ಳರ ಬಂಧನ, ಚಿನ್ನಾಭರಣ, 2 ಕಾರು ಸಮೇತ 20 ಲಕ್ಷ ರೂ ಬೆಲೆ ಬಾಳುವ ಸೂತ್ತು ವಶ

Spread the love

ಅಂತರ್ ರಾಜ್ಯ ಮನೆ ಕಳ್ಳರ ಬಂಧನ, ಚಿನ್ನಾಭರಣ, 2 ಕಾರು ಸಮೇತ 20 ಲಕ್ಷ ರೂ ಬೆಲೆ ಬಾಳುವ ಸೂತ್ತು ವಶ

ಉಡುಪಿ: ಅಜೆಕಾರು ಸೇರಿದಂತೆ ವಿವಿದೆಡೆ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ಅಂತರ್ ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಹೆಬ್ರಿ ತಾಲೂಕು ಶಿವಪುರದ ಪ್ರಸ್ತುತ್ತ ತಮಿಳುನಾಡು ನಿವಾಸಿ ದೀಲಿಪ್ ಶೆಟ್ಟಿ, ತಮಿಳುನಾಡು ನಿವಾಸಿಗಳಾದ ಷಣ್ಮುಗಂ, ಮತ್ತು ರಾಜನ್ ಎಂದು ಗುರುತಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧ ತಡೆಗಾಗಿ ಪೊಲೀಸ್ ಅಧೀಕ್ಷಕರು, ಉಡುಪಿ ಇವರ ಆದೇಶದಂತೆ ಬ್ರಹ್ಮಾವರ ವೃತ್ತದ ವ್ಯಾಪ್ತಿಯಲ್ಲಿ ವಿಶೇಷ ತಂಡ ರಚಿಸಿದ್ದು, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷರನಾದ ಅನಂತ ಪದ್ಮನಾಭ ರವರ ನೇತೃತ್ವದಲ್ಲಿ ಬ್ರಹ್ಮಾವರ ಠಾಣಾ ಪಿ.ಎಸ್.ಐ ಗುರುನಾಥ ಬಿ ಹಾದಿಮನಿ, ಕೋಟ ಠಾಣಾ ಪಿ.ಎಸ್.ಐ ಮಧು ಬಿ2, ಬ್ರಹ್ಮಾವರ ಠಾಣಾ ತನಿಖಾ ಪಿ.ಎಸ್.ಐ ಮುಕ್ತಾಬಾಯಿ, ಪ್ರೊಬೆಷನರಿ ಪಿ.ಎಸ್.ಐ. ಸುಬ್ರಹ್ಮಣ್ಯ ದೇವಾಡಿಗ, ಬ್ರಹ್ಮಾವರ ಠಾಣಾ ಸಿಬ್ಬಂದಿಯವರಾದ ವೆಂಕಟರಮಣ ದೇವಾಡಿಗ, ಪ್ರವೀಣ ಶೆಟ್ಟಿಗಾರ್, ಮೊಹಮ್ಮದ್ ಅಜ್ಜಲ್, ಅಣ್ಣಪ್ಪ ಹಾಗೂ ರೋಟ ರಾಣಾ ಸಿಬ್ಬಂದಿಯವರಾದ ಪ್ರಸನ್ನ, ರಾಘವೇಂದ್ರ, ಗೋಪಾಲ ನಾಯ್ಕ ಇವರನ್ನೂಳಗೊಂಡ ಜಂಟಿ ತಂಡವು ಜುಲೈ 29 ರಂದು ಬ್ರಹ್ಮಾವರ ಠಾಣಾ ಸರಹದ್ದಿನ ಪಾವಂಜೆ ಗ್ರಾಮದ ಶೇಡಿಗುಳಿ ಎಂಬಲ್ಲಿ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಸ್ಯಾಂಟೋ ಕಾರನ್ನು ನಿಲ್ಲಿಸಿ ಪರಿಶೀಲಿಸಿದಾಗ ಕಾರಿನಲ್ಲಿ ಮನೆಯ ಬಾಗಿಲು ಒಡೆಯುವ ಕಬ್ಬಿಣದ ರಾಡ್, ಬೆಳ್ಳಿಯ ಆಭರಣಗಳು ಪತ್ತೆಯಾಗಿದ್ದು, 3 ಜನ ಕುಖ್ಯಾತ ಕಳ್ಳರನ್ನು ಬಂಧಿಸಿದ್ದರು
ಷಣ್ಮುಗಂ ಎಂಬಾತ ದಿಲೀಪ್‌ ಶೆಟ್ಟಿ, ಶಿವಪುರ, ಹೆಬ್ರಿ ಎಂಬಾತನು ಸ್ಯಾಂಟ್ರೋ ಕಾರು ಮತ್ತು ಓಮಿನಿ ಕಾರನ್ನು ಬಳಸಿಕೊಂಡು ಬೆಂಗಳೂರಿನಿಂದ ಕಾರಿನಲ್ಲಿ ಕುಖ್ಯಾತ ಕಳ್ಳ (1) ರಾಜನ್ (2) ಕುಟ್ಟಿ ವಿಜಯನ್ (3) ಸಜಿತ ವರ್ಗಿಸ್ ಇವರೊಂದಿಗೆ ಬಂದು ಹಾಸನ, ದ.ಕ ಮತ್ತು ಉಡುಪಿ ಭಾಗದಲ್ಲಿ ಮನೆ ಕಳ್ಳತನ ನಡೆಸುತ್ತಿದ್ದನು.

ರಾಜನ್ ತನ್ನ 19 ನೇ ವಯಸ್ಸಿನಿಂದ ಕಳ್ಳತನ ಮಾಡುತ್ತಿದ್ದು, ಆತನ ವಿರುದ್ಧ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಮನೆ ಕಳ್ಳನ ಪ್ರಕರಣಗಳು ದಾಖಲಾಗಿರುತ್ತದೆ, ಕನಾ೯ಟಕ ರಾಜ್ಯದ ಚಿಕ್ಕಮಗಳೂರು 1 ಕುಮಟಾ-1, ಸುರತ್ಕಲ್ -4 ಹಾಗೂ ಕೇರಳ ರಾಜ್ಯದ ತಿರುಡೂರು-4, ಪಟ್ಟಂಬಿ-4, ತರೂರು-1, ತಮಿಳುನಾಡ ರಾಜ್ಯದ ನೀಲಗಿರಿ-3 ಪ್ರಕರಣಗಳು ದಾಖಲಾಗಿರುತ್ತದೆ. ಒಟ್ಟು ಉಡುಪಿ ಜಿಲ್ಲೆ ಸೇರಿ ರಾಜನ್ ಮೇಲೆ 22 ಕೇಸ ದಾಖಲಾಗಿದ್ದು ವಿವಿಧ ಠಾಣೆಗಳಲ್ಲಿ ಜಾಮೀನು ರಹಿತ ವಾರೆಂಟು ಇರುತ್ತದೆ.

ದಿಲೀಪ್‌ ಶೆಟ್ಟಿ ವಿರುದ್ಧ ಈ ಹಿಂದೆ ಹಾಸನದ ಅರಸೀಕೆರೆ, ಬೆಂಗಳೂರಿನ ಆರ್.ಎಂ.ಸಿ ಯಾರ್ಡ್, ನಂದಿನ ಲೇಹೌಟ್ ಮತ್ತು ಮಂಡ್ಯದ ನಾಗಮಂಗಲ, ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸುಲಿಗೆ, ಅಬಕಾರಿ, ಹನಿ-ಟ್ಯಾಪ್ ಪ್ರಕರಣ ಹಾಗೂ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ

ದಿಲೀಪ್‌ ಶೆಟ್ಟಿ ಹಾಗೂ ರಾಜನ್ ಇವರನ್ನು ವಿಚಾರಿಸಿದಾಗ ಬ್ರಹ್ಮಾವರ ಠಾಣಾ ಸರಹದ್ದಿನ 2 ರಾತ್ರಿ ಮ ಕಳ್ಳತನ, ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ-1 ರಾತ್ರಿ ಮನೆ ಕಳ್ಳತನ ಹಾಗೂ ಅಜೆಕಾರು ಠಾಣಾ ವ್ಯಾಪ್ತಿಯಲ್ಲಿ 2 ರಾತ್ರಿ ಮನೆ ಕಳ್ಳತನ ಪ್ರಕರಣಗಳಲ್ಲಿ ಸ್ವತ್ತು ಕಳವು, ಚಿನ್ನಾಭರಣ ಕಳವು ಮಾಡಿರುವುದು ತಿಳಿದು ಬಂದಿರುತ್ತದೆ ಕಳ್ಳರನದ ಮಾಲುಗಳನ್ನು ಬೆಂಗಳೂರು ಮತ್ತು ಕೊಯಮತ್ತೂರಿನಲ್ಲಿ ಅಡವಿಟ್ಟಿರುವುದನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ದಿಲೀಪ್‌ ಶೆಟ್ಟಿ ಹಾಗೂ ರಾಜನ್ ಕಡೆಯಿಂದ ಸುಮಾರು 13 ಲಕ್ಷ ಬೆಲೆ ಬಾಳುವ ಚಿನ್ನಾಭರಣ, ಬೆಳ್ಳಿ ಆಭರಣ 500 ಗ್ರಾಂ, ಮೌಲ್ಯ ರೂ 20,000/-, ಕೃತ್ಯಕ್ಕೆ ಬಳಸಿದ ಸ್ಯಾಂಟ್ರೋ ಕಾರು ಮೌಲ್ಯ 5 ಲಕ್ಷ, ಒಂದು ಓಮಿನಿ ಕಾರು ಮೌಲ್ಯ 2 ಲಕ್ಷ ಹಾಗೂ ಸುಮಾರು 20 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು, 5 ಮನೆ ಕಳ್ಳತ ಪ್ರಕರಣಗಳನ್ನು ಭೇಧಿಸಲಾಗಿದೆ.

ಜಿಲ್ಲಾ ಪೊಲೀಸ್‌ ಅಧೀಕ್ಷರಾದ ವಿಷ್ಣುವರ್ಧನ್ ಎನ್, ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ. ಸಿದ್ದಲಿಂಗಪ್ಪ ರವರ ಸುಧಾಕರ ಎಸ್ ನಾಯ್ಕ, ಪೊಲೀಸ್‌ ಉಪಾಧೀಕ್ಷರು, ಉಡುಪಿ ಉಪ ವಿಭಾಗ, ಉಡುಪಿರವರ ನಿರ್ದೇಶನದಂತೆ ಈ ಕಾರ್ಯಾಚರಣೆಯಲ್ಲಿ ಅನಂತ ಪದ್ಮನಾಭ ಸಿ.ಪಿ.ಐ ಬ್ರಹ್ಮಾವರ, ಬ್ರಹ್ಮಾವರ ಠಾಣಾ ಪಿ.ಎಸ್.ಐ ಗುರುನಾಥ ಬಿ ಹಾದಿಮನಿ, ತನಿಖಾ ಪಿ.ಎಸ್.ಐ ಮುಕ್ತಾಬಾಯಿ, ಕೋಟ ಠಾಣಾ ಪಿ.ಎಸ್.ಐ. ಮಧು ಬಿ.ಇ, ಬ್ರಹ್ಮಾವರ ಠಾಣಾ ಪ್ರೊಬೆಷನರಿ ಪಿ.ಎಸ್.ಐ. ಶ್ ಸುಬ್ರಮಣ್ಯ ದೇವಾಡಿಗ, ಬ್ರಹ್ಮಾವರ ಠಾಣಾ ಸಿಬ್ಬಂದಿಯವರಾದ ವೆಂಕಟರಮಣ ದೇವಾಡಿಗ, ಪ್ರವೀಣ ಶೆಟ್ಟಿಗಾರ್ ಮೊಹಮ್ಮದ್ ಅಸ್ಮಿಲ್‌, ರಾಘವೇಂದ್ರ ಕಾರ್ಕಡ, ಸಬಿತಾ, ಸುರೇಶ ಬಾಬು, ದಿಲೀಪ್‌, ಅಣ್ಣಪ್ಪ ಹಾಗೂ ಕೋಟ ಠಾಣ ಸಿಬ್ಬಂದಿಯವರಾದ ಪ್ರಸನ್ನ, ರಾಘವರಂದ್ರ, ದುಂಡಪ್ಪ, ಗೋಪಾಲ ನಾಯ್ಕ ಮತ್ತು ಜಿಲ್ಲಾ ತಾಂತ್ರಿಕ ವಿಭಾಗ ಸಿಬ್ಬಂದಿ ದಿನೇಶ್ ಪಾಲ್ಗೊಂಡಿರುತ್ತಾರೆ.

ಪೊಲೀಸ್‌ ಅಧೀಕ್ಷಕರು, ಉಡುಪಿ ಜಿಲ್ಲೆ ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಅಭಿನಂದಿಸಿರುತ್ತಾರೆ.


Spread the love

Leave a Reply

Please enter your comment!
Please enter your name here