ಅಕ್ಕಿಯಲ್ಲಿ ಅಡಗಿಸಿಟ್ಟ ರೂ. 10.5 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದೊಯ್ದ ಕಳ್ಳರು

Spread the love

ಅಕ್ಕಿಯಲ್ಲಿ ಅಡಗಿಸಿಟ್ಟ ರೂ. 10.5 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದೊಯ್ದ ಕಳ್ಳರು

ವಿಟ್ಲ: ಮನೆಯೊಂದಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣದ ಕಳವುಗೈದ ಘಟನೆ ವಿಟ್ಲ ಸಮೀಪದ ಉಕ್ಕುಡ ಎಂಬಲ್ಲಿ ನಡೆದಿದೆ.

ಉಕ್ಕುಡ ಚೆಕ್ ಪೋಸ್ಟಿನಿಂದ ಅನತಿ ದೂರದಲ್ಲಿರುವ ಉಕ್ಕುಡ ಅಬ್ಬಾಸ್ ಹಾಜಿ ಎಂಬವರ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯೊಳಗಡೆ ಅಕ್ಕಿಯೊಳಗೆ ಅಡಗಿಸಿಟ್ಟಿದ್ದ ಸುಮಾರು 10.5 ಲಕ್ಷ ಮೌಲ್ಯದ 44 ಪವನ್ ಚಿನ್ನಾಭರಣವನ್ನು ಕಳವುಗೈದಿದ್ದಾರೆ. ಇದೊಂದು ಪರಿಚಿತರ ಕೃತ್ಯವಾಗಿರುವ ಬಗ್ಗೆ ಪೋಲಿಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು, ಬಂಟ್ವಾಳ ವೃತ್ತ ನಿರೀಕ್ಷಕ ಪ್ರಕಾಶ್, ವಿಟ್ಲ ಎಸ್ಐ ನಾಗರಾಜ್ ಮತ್ತು ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.


Spread the love